ಬುಧವಾರ, ಡಿಸೆಂಬರ್ 2, 2020
23 °C

ಬಿಡುವಿಲ್ಲದೆ ದುಡಿದ ಪೌರಕಾರ್ಮಿಕರು: ಜಯಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಕೊರೊನಾ ಸಂಕಷ್ಟದ ಸಮಯದಲ್ಲೂ ಪೌರಕಾರ್ಮಿಕರು ನಿಷ್ಠೆಯಿಂದ ಬಿಡುವಿಲ್ಲದೆ ದುಡಿಮೆ ಮಾಡಿರುವುದು ಅನನ್ಯವಾಗಿದೆ ಎಂದು ನಗರಸಭೆ ಸದಸ್ಯ ಜಯಣ್ಣ ಹೇಳಿದರು.

ನಗರದ ಶ್ರೀಸಾಯಿ ಮಂದಿರ ಆವರಣದಲ್ಲಿ ಇನ್ಫೋಸಿಸ್‌ ಫೌಂಡೇಷನ್‌, ಪಾವಗಡದ ರಾಮಕೃಷ್ಣ ಆಶ್ರಮ, ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ಸಹಯೋಗದಲ್ಲಿ ಶನಿವಾರ ಏರ್ಪಡಿಸಿದ್ದ ಪೌರಕಾರ್ಮಿಕರಿಗೆ ಅಗತ್ಯ ದಿನಬಳಕೆ ವಸ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರ ಯಾವುದೇ ಮನ್ಸೂಚನೆ ನೀಡದೆ ಲಾಕ್‌ಡೌನ್‌ ಘೋಷಿಸಿದ್ದರಿಂದ ಎಲ್ಲರೂ ಸಂಕಷ್ಟ ಎದುರಿಸುವಂತಾಯಿತು. ಪೌರಕಾರ್ಮಿಕರು ಸವಾಲುಗಳ ಮಧ್ಯೆಯೂ ಕೆಲಸ ಮಾಡಿದ್ದಾರೆ ಎಂದರು.

ಕಿರಣ ಆದೋನಿ, ಹರೀಶ ನಾಡಗೌಡ, ಡಿಂಗ್ರಿ ನರೇಶ ಮತ್ತಿತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು