ರಾಯಚೂರು: ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ವತಿಯಿಂದ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಡಿ.20 ಹಾಗೂ 21ರಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಅರ್ಜುನ ಗೋಳಸಂಗಿ ಹೇಳಿದರು.

ಸಾಹಿತಿ ಜಯದೇವಿ ಗಾಯಕವಾಡ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಉದ್ಘಾಟಿಸಲಿದ್ದಾರೆ ಎಂದು ನಗರದಲ್ಲಿ ಭಾನುವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.

ಸಮ್ಮೇಳನದಲ್ಲಿ ‘ಸರ್ವರಿಗೂ ಸಂವಿಧಾನ‘ ಮತ್ತು ‘ಮೀಸಲಾತಿ ಒಳಗೆ ಮತ್ತು ಹೊರಗೆ’ ಕುರಿತು ಎರಡು ಸಂವಾದ ಗೋಷ್ಠಿಯನ್ನು ಆಯೋಜಿಸಲಾಗಿದೆ. ಸಂವಿಧಾನ ಕುರಿತು ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ.ಅಪ್ಪಗೆರೆ ಸೋಮಶೇಖರ ಹಾಗೂ ‘ಮೀಸಲಾತಿ ಒಳಗೆ ಮತ್ತು ಹೊರಗೆ’ ಕುರಿತು ಸಾಹಿತಿ ಗುರುಪ್ರಸಾದ ಕಂಟಲಗೆರೆ ವಿಷಯ ಮಂಡಿಸಲಿದ್ದಾರೆ ಎಂದು ಹೇಳಿದರು

ಸಮ್ಮೇಳನಾಧ್ಯಕ್ಷರ ಸಾಹಿತ್ಯದ ಕುರಿತು ವಿಚಾರ ಗೋಷ್ಠಿ, ಮಹಿಳಾ ಕಾವ್ಯಾಯಾನ, ಪುರುಷ ಕಾವ್ಯಾಯಾನ, ಸಾಂಸ್ಕೃತಿಕ ಕಾರ್ಯಕ್ರಮಗಳು, ರಾಷ್ಟ್ರೀಯ ಗೌರವ ಪ್ರಶಸ್ತಿ, ರಾಷ್ಟ್ರೀಯ ಯುವ ಪ್ರಶಸ್ತಿ, ರಾಷ್ಟ್ರೀಯ ಪುಸ್ತಕ ಪ್ರಶಸ್ತಿ, ಬಾಲ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಡಾ.ಎಲ್.ಹನುಮಂತಪ್ಪ ಆಶಯ ಭಾಷಣ ಮಾಡಲಿದ್ದಾರೆ. ಕಸಾಪ ನಿಕಟಪೂರ್ವ ಅಧ್ಯಕ್ಷ ಮನುಬಳಿಗಾರ, ಪ್ರೊ.ಎಚ್.ಟಿ.ಪೋತೆ, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು, ಅಧಿಕಾರಿಗಳು ಸಾಹಿತಿಗಳು, ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಡಿ.20ರಂದು ಬೆಳಿಗ್ಗೆ 8 ಗಂಟೆಗೆ ಬಸವೇಶ್ವರ ವೃತ್ತದಿಂದ ಜಿಲ್ಲಾ ರಂಗ ಮಂದಿರದ ವರೆಗೆ ಜಾನಪದ ಕಲಾ ತಂಡಗಳ ಮೆರವಣಿಗೆ ನಡೆಯಲಿದೆ. ಮೇಯರ್ ನರಸಮ್ಮ ಮಾಡಗಿರಿ ಮೆರವಣಿಗೆ ಚಾಲನೆ ನೀಡುವರು. ಬೆಳಿಗ್ಗೆ 10.30ಕ್ಕೆ ರಂಗ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಆರಂಭವಾಗಿದೆ ಎಂದು ಹೇಳಿದರು.

ಸಮ್ಮೇಳನದಲ್ಲಿ ಒಟ್ಟು ಆರು ಗೋಷ್ಠಿಗಳು ನಡೆಯಲಿವೆ. ಡಿ.21 ರಂದು ಸಂಜೆ 4 ಗಂಟೆಗೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ ಸಮಾರೋಪ ಭಾಷಣ ಮಾಡುವರು. ಬೀದರ್ನ ಬೌದ್ಧ ವಿಹಾರದ ವರಜ್ಯೋತಿ ಭಂತೇಜಿ ನೇತೃತ್ವ ವಹಿಸುವರು ಎಂದು ತಿಳಿಸಿದರು

ತಾಯರಾಜ್ ಮರ್ಚಟಾಳ, ಹುಸೇನಪ್ಪ ಅಮರಾಪೂರ, ಶರಣಪ್ಪ ಚಲವಾದಿ, ಪಾರ್ಥ ಸಿರವಾರ, ಧರ್ಮಾವತಿ ಎಸ್.ನಾಯಕ, ನರಸಿಂಹಲು, ರಾಮಣ್ಣ ಹಿರೆಭೇರಿಗಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.