ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಗಿಡ–ಮರಗಳ ನಾಶದಿಂದ ಪರಿಸರಕ್ಕೆ ಗಂಡಾಂತರ’

ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಹನಮಂತಪ್ಪ ಎಚ್ಚರಿಕೆ
Published 5 ಜೂನ್ 2024, 16:17 IST
Last Updated 5 ಜೂನ್ 2024, 16:17 IST
ಅಕ್ಷರ ಗಾತ್ರ

ರಾಯಚೂರು: ‘ಸ್ವಾರ್ಥಕ್ಕಾಗಿ ನಾವು ಪರಿಸರ ನಾಶ ಮಾಡಿ ಅನೇಕ ಸಮಸ್ಯೆ ಎದುರಿಸುತ್ತಿದ್ದು, ಈಗ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ಮತ್ತಷ್ಟು ಸಂಕಷ್ಟಕ್ಕೆ ಗುರಿಯಾಗಲಿದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಹನಮಂತಪ್ಪ ಎಚ್ಚರಿಸಿದರು.

ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ನಗರದ ಕೃಷಿ ತಂತ್ರಜ್ಞರ ಸಂಸ್ಥೆಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಜಾಗತೀಕ ತಾಪಮಾನ ಹೆಚ್ಚಾಗುತ್ತಿದೆ. ಹವಾಮಾನ ವೈಪರೀತ್ಯ ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಡಬೇಕಿದೆ. ಗಂಡಾಂತರ ತಪ್ಪಿಸಲು ಇದೊಂದೇ ಉಪಾಯ ಇದೆ’ ಎಂದು ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್. ಮಾತನಾಡಿ, ‘ರೈತರು ಕೃಷಿಯ ಜತೆಗೆ ಅರಣ್ಯ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು. ಬದುಗಳಲ್ಲಿ ಮತ್ತು ಕಡಿಮೆ ಫಲವತ್ತಾದ ಜಮೀನುಗಳಲ್ಲಿ ಅರಣ್ಯ ಸಸಿಗಳನ್ನು ಬೆಳಸುವುದರಿಂದ ವಾತಾವರಣದ ಶುದ್ಧಿಕರಣದೊಂದಿಗೆ ಲಾಭವನ್ನು ಪಡೆಯಬಹುದು’ ಎಂದರು.

‘ಇತ್ತೀಚಿನ ದಿನಗಳಲ್ಲಿ ರೈತರು ಬೆಳೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ಪದಾರ್ಥಗಳನ್ನು ಹಾಕುತ್ತಿರುವುದರಿಂದ ಮಣ್ಣಿನ ಫಲವತ್ತತೆ ನಾಶವಾಗುತ್ತಿದೆ. ರೈತರು ಸಾವಯವ ಕೃಷಿಗೆ ಆದ್ಯತೆ ನೀಡಬೇಕು’ ಎಂದು ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ ಮಾತನಾಡಿದರು.

ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷ ಆರ್.ಎ.ಪಾಟೀಲ, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಬಿ.ವಿ.ಪಾಟೀಲ, ಗ್ರೀನ್ ರಾಯಚೂರಿನ ಉಪಾಧ್ಯಕ್ಷ ಸಿ.ವಿ.ಪಾಟೀಲ, ಕೃಷಿಕ ಸಮಾಜದ ಅದ್ಯಕ್ಷ ಎಸ್.ಎಂ.ಸಿದ್ದಾರೆಡ್ಡಿ, ಎಂ.ಭೀಮಣ್ಣ ಹಾಗೂ ಶರಣಗೌಡ ಹಿರೇಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT