ಶುಕ್ರವಾರ, ಅಕ್ಟೋಬರ್ 23, 2020
27 °C

ಮಂತ್ರಾಲಯ: ದರ್ಶನಕ್ಕೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಗೆ ದರ್ಶನ ಪಡೆಯಲು ಶುಕ್ರವಾರದಿಂದ ಅವಕಾಶ ಕಲ್ಪಿಸಲಾಗಿದೆ.

ಮಠದ ಮುಂಭಾಗದಲ್ಲಿ ಅಂತರ ಕಾಯ್ದುಕೊಂಡು ಸರದಿಯಲ್ಲಿ ನಿಲ್ಲುವುದಕ್ಕೆ ವ್ಯವಸ್ಥೆ ಇದ್ದು, ಸಾಮಾನ್ಯ ದರ್ಶನಕ್ಕೆ ಮಾತ್ರ ಅವಕಾಶವಿದೆ. ವಿಐಪಿ ದರ್ಶನ ಇನ್ನೂ ಆರಂಭಿಸಿಲ್ಲ.

ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥರು ಮಹಾದ್ವಾರವನ್ನು ತೆರೆದು, ಭಕ್ತರು ದರ್ಶನ ಪಡೆಯಲು ಅನುವು ಮಾಡಿದರು. ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಕೊರೊನಾ ಸೋಂಕು ತಡೆಯ ಮುನ್ನಚ್ಚರಿಕೆ ಕ್ರಮವಾಗಿ ಮಾರ್ಚ್‌ನಿಂದ ದರ್ಶನ ನಿರ್ಬಂಧಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.