ಶುಕ್ರವಾರ, ಸೆಪ್ಟೆಂಬರ್ 17, 2021
28 °C

ಕೋವಿಡ್‌ ಎರಡನೇ ಅಲೆ: ಮಂತ್ರಾಲಯದಲ್ಲಿ ದರ್ಶನ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಕೋವಿಡ್‌ ಎರಡನೇ ಅಲೆ ವ್ಯಾಪಿಸುತ್ತಿರುವುದರಿಂದ ಸುಕ್ಷೇತ್ರ ಮಂತ್ರಾಲಯದ ಶ್ರೀರಾಘವೇಂದ್ರ ಮಠದಲ್ಲಿ ಮೇ 1 ರಿಂದ ಭಕ್ತರಿಗೆಲ್ಲ ದರ್ಶನ ಸ್ಥಗಿತಗೊಳಿಸಲಾಗಿದೆ.

ಸ್ಥಳೀಯವಾಗಿ ಲಾಕ್‌ಡೌನ್‌ ವಿಧಿಸಿರುವುದರಿಂದ ಮುಂದಿನ ಸೂಚನೆ ನೀಡುವವರೆಗೂ ಭಕ್ತರಿಗೆ ಮಂತ್ರಾಲಯ ಕ್ಷೇತ್ರಕ್ಕೆ ದರ್ಶನ ಅವಕಾಶವಿಲ್ಲ ಎಂದು ಮಠದ ವ್ಯವಸ್ಥಾಪಕ ವೆಂಕಟೇಶ ಜೋಶಿ ತಿಳಿಸಿದ್ದಾರೆ.

ಆದರೆ, ಮಠದಲ್ಲಿ ಪೂಜಾ ಕೈಂಕರ್ಯಗಳು ಎಂದಿನಂತೆ ನಡೆಯುತ್ತವೆ. ಪಂಚಾಮೃತ, ರಥೋತ್ಸವ ಸೇವೆಗಳಿರುತ್ತವೆ. ಭಕ್ತರು ಆನ್‌ಲೈನ್‌ ಮೂಲಕ ಸೇವೆಗಳಲ್ಲಿ ಪಾಲ್ಗೊಂಡು ಕೃತಾರ್ಥರಾಬಹುದು ಎಂದು ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು