ಪ್ರಜಾವಾಣಿ ವಾರ್ತೆ

ರಾಯಚೂರು: ‘ಪ್ರತಿಯೊಬ್ಬರ ಜೀವನದಲ್ಲಿ ಕ್ರೀಡೆಗಳು ಮಹತ್ವ ಪಡೆದುಕೊಳ್ಳುತ್ತವೆ. ಓದು-ಬರಹದ ಜತೆ ಕ್ರೀಡೆಗಳಲ್ಲಿ ಭಾಗವಹಿಸುವವರ ಜೀವನ ಕ್ರಿಯಾಶೀಲ ಹಾಗೂ ಪರಿಪೂರ್ಣ ಆಗಿರುತ್ತದೆ‘ ಎಂದು ಜಿ.ಪಂ ಮುಖ್ಯ ಯೋಜನಾಧಿಕಾರಿ ಟಿ.ರೋಣಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕ್ರೀಡಾಪಟುಗಳು ಶಿಸ್ತು ಮೈಗೂಡಿಸಿಕೊಳ್ಳುವುದು ಮುಖ್ಯ. ಅದರಿಂದ ಕ್ರೀಡೆಯಲ್ಲಿ ಯಶಸ್ಸಿನ ಜತೆ ಜೀವನದಲ್ಲಿ ಸಾಧನೆ ಮಾಡಿದಂತಾಗುತ್ತದೆ’ ಎಂದು ಹೇಳಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣ ಶಾವಂತಗೇರಿ ಮಾತನಾಡಿ, ‘ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಅವುಗಳಿಗೆ ಅಂಜದೆ ಪ್ರತಿಯೊಬ್ಬರೂ ಧೈರ್ಯದಿಂದ ಪಾಲ್ಗೊಳ್ಳಬೇಕು’ ಎಂದು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವೀರೇಶ ನಾಯಕ ಮಾತನಾಡಿ, ‘ಈಗಾಗಲೇ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಯಶಸ್ವಿಯಾಗಿ ನೆರವೇರಿಸಲಾಗಿದೆ. ತಾಲ್ಲೂಕು ಮಟ್ಟದಲ್ಲಿ ವಿಜೇತ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿಜೇತರಾದವರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ, ನಂತರ ವಿಭಾಗದ ಮಟ್ಟದ ವಿಜೇತ ಕ್ರೀಡಾಪಟುಗಳು ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗುವರು‘ ಎಂದು ವಿವರಿಸಿದರು.

‘ರಾಜ್ಯಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್ 22 ರಿಂದ 25 ರವರೆಗೆ ಮೈಸೂರಿನ ಚಾಮುಂಡಿ ವಿಹಾರದ ಕ್ರೀಡಾಂಗಣದಲ್ಲಿ ನಡೆಯಲಿದೆ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪುರುಷರು ಹಾಗೂ ಮಹಿಳಾ ಕ್ರೀಡಾಪಟುಗಳು ಆನ್ಲೈನ್ ನೋಂದಣಿ ಮಾಡಿಕೊಂಡಿದ್ದಾರೆ. ಹೆಚ್ಚು ಕ್ರೀಡಾಪುಟಗಳು ಭಾಗವಹಿಸುವ ನಿರೀಕ್ಷೆ ಇದೆ’ ಎಂದು ಹೇಳಿದರು.

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ ಬ್ಯಾಸ್ಕೇಟ್ ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್ ಬಾಲ್, ಟೇಬಲ್ ಟೆನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಸೇರಿದಂತೆ ವಿವಿಧ ವಿಭಾಗಗಳ ಸ್ಪರ್ಧೆಗಳಲ್ಲಿ ಪುರುಷ ಮತ್ತು ಮಹಿಳಾ ಸ್ಪರ್ಧಿಗಳು ಹುಮ್ಮಸ್ಸಿನಿಂದ ಭಾಗವಹಿಸಿ ಗೆಲುವಿಗಾಗಿ ಸೆಣಸಾಡಿದರು.

ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪರಶುರಾಮ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.