ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಯುವ ನಿಧಿ ಯೋಜನೆಯ ಲಾಭ ಪಡೆಯಲು ಜಿಲ್ಲಾಧಿಕಾರಿ ಸಲಹೆ

Published 8 ಜನವರಿ 2024, 13:34 IST
Last Updated 8 ಜನವರಿ 2024, 13:34 IST
ಅಕ್ಷರ ಗಾತ್ರ

ರಾಯಚೂರು: 2022-2023ನೇ ಸಾಲಿನಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾಗಿ ಉದ್ಯೋಗ ದೊರೆಯದ ಯುವಕರು ಯುವ ನಿಧಿ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ತಿಳಿಸಿದ್ದಾರೆ.

ಪದವಿ ಪಾಸಾದ ಆರು ತಿಂಗಳ ಒಳಗಾಗಿ ಉದ್ಯೋಗಾವಕಾಶ ಲಭಿಸದಿದ್ದಲ್ಲಿ, ಅಂತಹ ಪದವೀಧರರಿಗೆ ಪ್ರತಿ ತಿಂಗಳು ₹3000 ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ₹1500 ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ಅಥವಾ ಉದ್ಯೋಗ ದೊರಕುವವರೆಗೆ ನೀಡಲಾಗುವುದು ಎಂದು ಹೇಳಿದ್ದಾರೆ.

ವಿದ್ಯಾಭ್ಯಾಸ ಮುಂದುವರಿಸಿರುವ ಅಥವಾ ಉದ್ಯೋಗದಲ್ಲಿ ತೊಡಗಿರುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಹರಲ್ಲ. ಯುವನಿಧಿ ಯೋಜನೆಯಡಿಯಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಜಿಲ್ಲೆಯ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‌, ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಉಚಿತವಾಗಿ ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಮಾಹಿತಿಗೆ ದೂರವಾಣಿ ಸಂಖ್ಯೆ: 8073610442/ 98808 02184 ಅಥವಾ ಸಹಾಯವಾಣಿ ಸಂಖ್ಯೆ:180059 99918 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT