ಬುಧವಾರ, ಅಕ್ಟೋಬರ್ 16, 2019
26 °C
ಜಿಲ್ಲಾ ಕ್ರೀಡಾಂಗಣ ಕಾಮಗಾರಿಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ

ಕ್ರೀಡಾ ಸೌಕರ್ಯ ಕಲ್ಪಿಸಲು ಅಗತ್ಯ ಕ್ರಮ

Published:
Updated:
Prajavani

ರಾಯಚೂರು: ಒಳಾಂಗಣ ಹಾಗೂ ಹೊರಾಂಗಣ ಕ್ರೀಡೆಗಳ ಸಮಗ್ರ ಅಭಿವೃದ್ಧಿಗಾಗಿ ಅಗತ್ಯ ಯೋಜನೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಸೂಚಿಸಿದರು.

ಜಿಲ್ಲಾಡಳಿತ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಕ್ರೀಡಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕ್ರೀಡಾಂಗಣ ಸುಸಜ್ಜಿತವಾಗಿರಲು ಅಗತ್ಯವಾದ ಅಂದಾಜು ಪಟ್ಟಿ ಸಿದ್ಧಪಡಿಸಿ ಅನುದಾನಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು. ಶಿಥಿಲಗೊಂಡ ಈಜುಕೊಳ ಸರಿಪಡಿಸಬೇಕು. ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸೌಕರ್ಯ ಒದಗಿಸಿ ಕ್ರೀಡಾಂಗಣದ ಸುತ್ತಮುತ್ತ ಶಿಸ್ತಿನ ಪರಿಸರ ಕಾಪಾಡಬೇಕು. ಕ್ರೀಡಾ ಚಟುವಟಿಕೆಗಳಿಗೆ ಬರುವ ಅನುದಾನದಲ್ಲಿ ಎಷ್ಟು ಖರ್ಚಾಗಿದೆ ಎನ್ನುವ ಸವಿವರ ವರದಿ ನೀಡಬೇಕು ಎಂದರು.

ಸಭೆಯ ನಂತರ ಸಮಿತಿ ಸದಸ್ಯರೆಲ್ಲರೂ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ಹಾಗೂ ಇತರರು ಇದ್ದರು.

Post Comments (+)