ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಸ್‌ಸಿಪಿ, ಟಿಎಸ್‌ಪಿ ಕಾಮಗಾರಿ ಪೂರ್ಣಗೊಳಿಸಿ’

ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಸಭೆ
Last Updated 9 ಜನವರಿ 2020, 14:09 IST
ಅಕ್ಷರ ಗಾತ್ರ

ರಾಯಚೂರು: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಗೆ ಸಂಬಂಧಿಸಿದ ಬಾಕಿ ಕಾಮಗಾರಿಗಳನ್ನು ಫೆಬ್ರವರಿ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 2019–20ನೇ ಸಾಲಿನ ವಿವಿಧ ಇಲಾಖೆಗಳ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್‌ಸಿಪಿ, ಟಿಎಸ್‌ಪಿ) ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದವರು ವಾಸಿಸುತ್ತಿರುವ ಕಾಲೋನಿಗಳ ಅಭಿವೃದ್ಧಿಗೆ ಬಿಡುಗಡೆಯಾಗುವ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಸಮುದಾಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ದೊರೆಯುವ ವಿವಿಧ ಯೋಜನೆಗಳ ಸೌಲಭ್ಯವನ್ನು ವಿತರಿಸಬೇಕು. ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನ ಬಳಕೆ ಮಾಡದೆ ಇದ್ದಲ್ಲಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಪತ್ರ ಬರೆಯಲಾಗುತ್ತದೆ ಎಂದು ಎಚ್ಚರಿಸಿದರು.

2019–20ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನವನ್ನು ಮಾರ್ಚ್ ಅಂತ್ಯದೊಳಗೆ ಖರ್ಚು ಮಾಡಬೇಕು. ಇಲ್ಲದಿದ್ದಲ್ಲಿ ಆ ಅನುದಾನ ವಾಪಸಾಗಲಿದೆ. ಆದಕಾರಣ ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಕೃಷಿ ಇಲಾಖೆಯಲ್ಲಿ ಎಸ್‌ಸಿಪಿ ಯೋಜನೆಯಡಿ ಲಘು ನೀರಾವರಿ, ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಶೇ 42 ರಷ್ಟು ಪ್ರಗತಿ ಸಾಧಿಸಲಾಗಿದೆ. ಟಿಎಸ್‌ಪಿ ಯೋಜನೆಯಲ್ಲಿ ಶೇ 68 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ, ತೋಟಗಾರಿಕೆ ಇಲಾಖೆ, ಪಶುಪಾಲನೆ, ರೇಷ್ಮೆ ಇಲಾಖೆ, ಮೀನುಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಹಕಾರ ಸಂಘಗಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಎಸ್‌ಸಿಪಿ ಮತ್ತು ಟಿಎಸ್‌ಪಿ ಯೊಜನೆಯಡಿ ಶೇ 100 ರಷ್ಟು ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳ ಅನುಷ್ಠಾನದಲ್ಲಿ ಶೇ 100 ರಷ್ಟು ಪ್ರಗತಿ ಸಾಧಿಸಿದೆ ಎಂದು ಸಹಾಯಕ ನಿರ್ದೇಶಕಿ ಮಂಗಳಾ ನಾಯಕ ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸುಬ್ರಮಣ್ಯ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT