ಶುಕ್ರವಾರ, ಜನವರಿ 24, 2020
28 °C

‘ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯ ಒದಗಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನಗರದಲ್ಲಿರುವ ಸಫಾಯಿ ಕರ್ಮಚಾರಿಗಳ ಸಮೀಕ್ಷೆ ನಡೆಸಿ, ಅವರಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಫಾಯಿ ಕರ್ಮಚಾರಿಗಳು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ್ದಾರೆ. ಅವರನ್ನು ಗುರುತಿಸಲು ಸಮೀಕ್ಷೆ ಮಾಡಬೇಕು. ರಾಯಚೂರು ನಗರದಲ್ಲಿ ಸಫಾಯಿ ಕರ್ಮಚಾರಿಗಳು ಹೆಚ್ಚಿರುವ ಪ್ರದೇಶದಲ್ಲಿ ಶಿಬಿರ ಏರ್ಪಡಿಸಿ, ಅಲ್ಲಿ ಅವರಿಗೆ ಬೇಕಾದ ಸೌಲಭ್ಯಗಳನ್ನು ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ನಗರಾಭಿವೃದ್ದಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.

ಸಫಾಯಿ ಕರ್ಮಚಾರಿಗಳಿಗೆ ಹ್ಯಾಂಡ್ ಗ್ಲೌಸ್, ಮಾಸ್ಕ್‌ಗಳನ್ನು ಪೂರೈಕೆ ಮಾಡುವ ಕಾರ್ಯ ವ್ಯವಸ್ಥಿತವಾಗಿ ಮಾಡಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ನೇರಸಾಲ ಯೋಜನೆಯಡಿ ಸಫಾಯಿ ಕರ್ಮಚಾರಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಸಫಾಯಿ ಕರ್ಮಚಾರಿಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಹ್ಮದ್ ಯೂಸೂಫ್, ಸಹಾಯಕ ಆಯುಕ್ತ ಸಂತೋಷ್, ತಹಶೀಲ್ದಾರ್‌ ಹಂಪಣ್ಣ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ನಗರಸಭೆಯ ಅಧಿಕಾರಿಗಳು, ಸಫಾಯಿ ಕರ್ಮಚಾರಿಗಳು ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು