ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರ್ಭಿಣಿಯರ ಆರೋಗ್ಯಕ್ಕೆ ಒತ್ತು ನೀಡಿ

Last Updated 6 ಅಕ್ಟೋಬರ್ 2020, 14:22 IST
ಅಕ್ಷರ ಗಾತ್ರ

ರಾಯಚೂರು: ಗರ್ಭಿಣಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಸರ್ಕಾರದ ಯೋಜನೆಯನ್ನು ಸಮರ್ಪಕವಾಗಿ ತಲುಪಬೇಕು. ಅವರಿಗೆ ಪೌಷ್ಟಿಕ ಆಹಾರ ವಿತರಿಸಲು ಸರಿಯಾದ ಅಂಕಿಅಂಶ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ‘ಗರ್ಭಿಣಿಯರ ಆರೋಗ್ಯಕ್ಕಾಗಿ ಮಹತ್ವಾಕಾಂಕ್ಷೆ ಯೋಜನೆಯ ಪ್ರಗತಿಪರಿಶೀಲನಾ ಸಭೆ’ಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿರುವ ಪ್ರಸ್ತುತ ಗರ್ಭಿಣಿ ಮಹಿಳೆಯರ ಸರಿಯಾದ ಅಂಕಿ ಸಂಖ್ಯೆ ದಾಖಲಿಸಿಲ್ಲ. ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕುಟುಂಬ ಇಲಾಖೆ ಹೆಚ್ಚಿನ ಮುತೂವರ್ಜಿ ವಹಿಸಿ ಕೆಲಸ ಮಾಡಬೇಕು. ಇಲಾಖೆಯಿಂದ ದಾಖಲಿಸಿದ ಮಾಹಿತಿ ನಿಖರವಾಗಿಲ್ಲ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಹಿಂದಿನ ಅಂಕಿ ಅಂಶಗಳನ್ನೇ ಆಧಾರವಾಗಿಟ್ಟುಕೊಂಡಿದ್ದೀರಿ. ಪ್ರತಿ ತಿಂಗಳು ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ವಿತರಿಸಿದ ಬಗ್ಗೆ ಮಾಹಿತಿ ದಾಖಲಿಸಬೇಕು ಎಂದು ಹೇಳಿದರು.

ಮಹಿಳೆಯರ ಆರೋಗ್ಯಕ್ಕಾಗಿ ಇರುವ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಬೇಕು. ನಿಗಧಿತ ಅವಧಿಯಲ್ಲಿ ಗರ್ಭಿಣಿಯರು ಪೌಷ್ಟಿಕ ಆಹಾರ ಸೇವನೆ ಮಾಡಬೇಕಿದೆ. ಹಲವಾರು ಮಹಿಳೆಯರು ಕಬ್ಬಿಣಾಂಶಗಳ ಕೊರತೆ ಎದುರಿಸುತ್ತಾರೆ. ಮಹಿಳೆಯರ ಆರೋಗ್ಯ ಸಂಬಂಧ ಹೆಚ್ಚಿನ ಕಾಳಜಿ ವಹಿಸಬೇಕು. ಕೋವಿಡ್ ನೆಪದಲ್ಲಿ ಕೆಲಸದಿಂದ ಜಾರಿಕೊಳ್ಳಬಾರದು. ಜಿಲ್ಲೆಯ ಮಹಾತ್ವಾಕಾಂಕ್ಷಿ ಯೋಜನೆಯ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣ, ಡಾ. ಸುರೇಶಂದ್ರ ಬಾಬು, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT