ಶುಕ್ರವಾರ, ಫೆಬ್ರವರಿ 21, 2020
25 °C

’ಮತದಾರರ ಪಟ್ಟಿ ಸಮರ್ಪಕವಾಗಿ ಸಿದ್ದಪಡಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯಲ್ಲಿ ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ಸಿದ್ದಪಡಿಸುವಂತೆ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ ಟಿ.ಕೆ.ಅನಿಲಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಯಾವುದೇ ಲೋಪದೋಷ ಅಗದಂತೆ ಸಿದ್ದಪಡಿಸಬೇಕು, ಅಂತಿಮ ಮತದಾರರ ಪಟ್ಟಿಯನ್ನು ಫೆ. 7ರಂದು ಪ್ರಕಟಿಸಲಾಗುವುದು. ಜಿಲ್ಲೆಯ ಯುವಕರು, ಯುವತಿಯರು ಹಾಗೂ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆ ಮಾಡಿಕೊಳ್ಳಲು ನಮೂನೆ 6ರಲ್ಲಿ ಅರ್ಜಿ ಸಲ್ಲಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಪುನರಾವರ್ತನೆಯಾದರೆ ಅಂತಹ ಹೆಸರನ್ನು ತೆಗೆದು ಹಾಕಲು ನಮೂನೆ 7ರಲ್ಲಿ ಹಾಗೂ ಹೆಸರು ತಿದ್ದುಪಡಿ ಬಯಸಿದ್ದಲ್ಲಿ ನಮೂನೆ 8ರಲ್ಲಿ ಸೂಕ್ತ ದಾಖಲೆಯೊಂದಿಗೆ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದರು.

ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 16,39,877 ಮತದಾರರು ಇದ್ದಾರೆ. ಇದರಲ್ಲಿ ಪುರುಷರು 8,05,389 ಮಹಿಳೆಯರು 8,34,178 ಹಾಗೂ ಇತರರು 310 ಇದ್ದಾರೆ. ರಾಯಚೂರು ಗ್ರಾಮೀಣ ವಿಧಾನಸಭೆ ಕ್ಷೇತ್ರದಲ್ಲಿ 275 ಬೂತ್‌ಗಳಿವೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ, ಸಹಾಯಕ ಆಯುಕ್ತ ಸಂತೋಷ್ ಕಾಮಗೌಡ, ಲಿಂಗಸುಗೂರು ಸಹಾಯಕ ಆಯುಕ್ತ ದಿಲೀಷ್, ತಹಶೀಲ್ದಾರ್‌ ಡಾ.ಹಂಪಣ್ಣ, ಚಾಮರಾಜ ಪಾಟೀಲ, ಬಲರಾಮ ಕಟ್ಟಿಮನಿ, ಶಿವಾನಂದ ಪಿ.ಸಾಗರ, ಮಂಜುನಾಥ, ಶೃತಿ ಅಂಗವಿಕಲ ಅಧಿಕಾರಿ ಶ್ರೀದೇವಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)