ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

21ರಂದು ಜಿಲ್ಲಾಧಿಕಾರಿ ನಡೆ ಕಾರ್ಯಕ್ರಮ

Last Updated 14 ಮೇ 2022, 14:22 IST
ಅಕ್ಷರ ಗಾತ್ರ

ದೇವದುರ್ಗ: ಕಂದಾಯ ಇಲಾಖೆಯ ಪ್ರತಿ ತಿಂಗಳ ಮೂರನೇ ಶನಿವಾರ ಆರಂಭಿಸಿರುವ ‘ಜಿಲ್ಲಾಧಿಕಾರಿ ನಡೆ ಹಳ್ಳಿಗಳ‌ ಕಡೆ’ ಕಾರ್ಯಕ್ರಮ ಮೇ 21 ರಂದು ಗಬ್ಬೂರು ಹೋಬಳಿಯ ಹೇಮನಾಳ ಗ್ರಾಮದಲ್ಲಿ ನಡೆಯಲಿದೆ ಎಂದು ತಹಶೀಲ್ದಾರ್ ಶ್ರೀನಿವಾಸ ಚಾಪೆಲ್ ತಿಳಿಸಿದರು.

ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶನಿವಾರ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿರಬೇಕು. ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಧ್ವನಿವರ್ಧಕ ಮತ್ತು ಡಂಗುರ ಸಾರುವ ಮೂಲಕ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.

ಸಭೆಗೆ ಜಿಲ್ಲಾಮಟ್ಟದ ಎಲ್ಲಾ ಎಲ್ಲಾ ಇಲಾಖೆ ಅಧಿಕಾರಿಗಳು ಹಾಜರಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ನಿಭಾಯಿಸುವಂತೆ ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ವಿವಿಧ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT