ಶನಿವಾರ, ಸೆಪ್ಟೆಂಬರ್ 25, 2021
30 °C

ರಾಯಚೂರು: ಭತ್ತದ ಪರ್ಯಾಯ ಬೆಳೆ ಅಭಿವೃದ್ಧಿಗೆ ಜಿಲ್ಲಾಧಿಕಾರಿ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯಲ್ಲಿ ಅತಿಹೆಚ್ಚು ಭತ್ತ ಬೆಳೆಯುತ್ತಿದ್ದು, ಭತ್ತಕ್ಕೆ ಕ್ರಿಮಿನಾಶಕ-ರಸಗೊಬ್ಬರ ಹೆಚ್ಚು ಬಳಸುವುದರಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತದೆ. ಕೃಷಿ ವಿಶ್ವವಿದ್ಯಾಲಯ ರಾಯಚೂರು ಮತ್ತು ಕೃಷಿ ಇಲಾಖೆ ಜಂಟಿಯಾಗಿ ಭತ್ತದ ಪರ್ಯಾಯ ಬೆಳೆ ಬೆಳೆಯಲು ಚಿಂತನೆ ನಡೆಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ್ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಾತ್ವಾಕಾಂಕ್ಷಿ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ಮಾತನಾಡಿದರು.

ಭತ್ತಕ್ಕೆ ಪರ್ಯಾಯ ಬೆಳೆ ಬೆಳೆಯಲು ಬೇಕಾದ ತಾಂತ್ರಿಕ ಸಲಹೆಗಳನ್ನು ರೈತಾಪಿ ವರ್ಗಕ್ಕೆ ಪರಿಚಯಿಸಬೇಕಾಗಿದೆ. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನಯಅಡಿ ಬಾಕಿ ಇರುವ ಬೆಳೆ ವಿಮೆಯನ್ನು ಸಂಬಂಧಿಸಿದ ರೈತರ ಖಾತೆಗೆ ಜಮೆ ಮಾಡುವಂತೆ ಸೂಚಿಸಿದರು.

ಅಂಗನವಾಡಿ ಸ್ವಂತ ಕಟ್ಟಡಕ್ಕೆ ಬೇಕಾಗಿರುವ ಖಾಲಿ ನಿವೇಶನಗಳನ್ನು ಗುರುತಿಸುವ ಕೆಲಸ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನರ್ದೇಶಕರು, ನಗರಸಭೆ ಮತ್ತು ಗ್ರಾಮಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳ ಚರ್ಚಿಸಿ ಖಾಲಿ ನಿವೇಶನಗಳನ್ನು ಗುರುತಿಸಬೇಕಾಗಿದೆ. ಸರ್ಕಾರಿ ಶಾಲಾ, ಕಾಲೇಜು ಹಾಗೂ ವಸತಿ ನಿಲಯಗಳಲ್ಲಿರುವ ವಿದ್ಯುತ್ ಪರಿರ್ತಕಗಳನ್ನು ಸ್ಥಳಾಂತರಿಸಿ ಸುರಕ್ಷಿತ ಶಾಲಾ ಆವರಣ ರೂಪಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನರ್ವಹಣಾಧಿಕಾರಿ ಶೇಖ್‌ ತನ್ವೀರ್ ಆಸೀಫ್‌ ಮಾತನಾಡಿ, ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ, ಶೌಚಾಲಯ ಸೇರಿದಂತೆ ಸರ್ಕಾರಿ ಸ್ವಾಮ್ಯದ ಕಟ್ಟಡಗಳಿಗೆ ಉಚಿತ ನೀರಿನ ಸಂಪರ್ಕ ಕಲ್ಪಿಸಲಾಗುವುದು. ನೀರಿನ ಸೌಲಭ್ಯ ಇಲ್ಲದ ಶಾಲಾ ಅಂಗನವಾಡಿ ಕೇಂದ್ರ ಸೇರಿದಂತೆ ಸರ್ಕಾರಿ ಕಟ್ಟಡದ ಮುಖ್ಯಸ್ಥರು ತಾಲ್ಲೂಕು ಪಂಚಾಯಿತಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಂಪರ್ಕ ಕಲ್ಪಿಸಿಕೊಳ್ಳಲು ತಿಳಿಸಿದರು.

ಶಿಕ್ಷಣ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಪಶು ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ
ಮಾಡಲಾಯಿತು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಮಲ್ಲಿಕಾರ್ಜುನ್. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನರ್ದೇಶಕ ವೀರನಗೌಡ, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಡಾ. ಟಿ. ರೋಣಿ, ಗ್ರೇಡ್ -2 ತಹಸಿಲ್ದಾರ್ ಆಶಿಫ್, ವ್ಯವಸ್ಥಾಪಕ ಯೂಸಫ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು