ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಮನವೊಲಿಕೆ: ಕೇರ್‌ಗೆ ರವಾನೆ

Last Updated 25 ಮೇ 2021, 16:14 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕಿತರನ್ನು ಪತ್ತೆ ಹಚ್ಚಿ, ಅವರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ನೆರವಾಗಿ, ಸಂಬಂಧಿಸಿದವರು ಈ ಕಾರ್ಯವನ್ನು ಮತ್ತಷ್ಟು ಉತ್ಸಾಹದಿಂದ ಮಾಡಲು ಪ್ರೇರಣೆ ನೀಡಿದರು.

ಜಿಲ್ಲೆಯ ಇಬ್ಬರು ಸಹಾಯಕ ಆಯುಕ್ತರು, ತಹಶೀಲ್ದಾರರು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಪ್ರತಿದಿನ ಎರಡು ಗ್ರಾಮಗಳಿಗೆ ತೆರಳಿ ಅಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಂಡ ಕ್ರಮಗಳು ಹಾಗೂ ಸೋಂಕಿತರನ್ನು ಪತ್ತೆ ಹಚ್ಚಿ ಅವರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

ಗ್ರಾಮೀಣ ಭಾಗದಲ್ಲಿ ಅಧಿಕಾರಿಗಳು ಕೋವಿಡ್ ಸೋಂಕಿತರನ್ನು ಪತ್ತೆ ಹಚ್ಚುವ, ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವ, ಸೋಂಕಿತರಿಗೆ ಮಾನಸಿಕ ಧೈರ್ಯ ತುಂಬುವ ಹಾಗೂ ಮನೆ ಮನೆ ಸರ್ವೆ ಕಾರ್ಯ ಆರಂಭಿಸಲಾಗಿದೆ. ಇದನ್ನು ಪರಿಶೀಲಿಸುವುದಕ್ಕಾಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ರಾಯಚೂರು ತಾಲ್ಲೂಕಿನ ರಘುನಾಥನಹಳ್ಳಿಗೆ ಭೇಟಿ ನೀಡಿದರು.

ಗ್ರಾಮದಲ್ಲಿದ್ದ ಕೋವಿಡ್ ಪಾಸಿಟಿವ್ ಸೋಂಕಿತರ ಮನವೊಲಿಸಿ ಯರಮರಸ್‌ನ ಕೋವಿಡ್ ಕೇರ್ ಸೆಂಟರ್‌ಗೆ ಕಳುಹಿಸಲಾಯಿತು.

ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್, ಕಲ್ಮಲಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಸಲಾಂಪಾಷಾ, ಅಂಗನವಾಡಿ ಮೇಲ್ವಿಚಾರಕಿ ಶಾಂತಾ, ಆರೋಗ್ಯ ಇಲಾಖೆಯ ಸಿಬ್ಬಂದಿ ರಾಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT