ಮಳೆ ಅಭಾವದಿಂದ ಒಣಗುತ್ತಿರುವ ಬೆಳೆ ವೀಕ್ಷಿಸಿದ ಜಿಲ್ಲಾಧಿಕಾರಿ

7

ಮಳೆ ಅಭಾವದಿಂದ ಒಣಗುತ್ತಿರುವ ಬೆಳೆ ವೀಕ್ಷಿಸಿದ ಜಿಲ್ಲಾಧಿಕಾರಿ

Published:
Updated:
Deccan Herald

ರಾಯಚೂರು: ದೇವದುರ್ಗ ತಾಲ್ಲೂಕಿನ ಗಬ್ಬೂರು ಹೋಬಳಿಯ ಖಾನಾಪುರ, ಕೂಡ್ಲಿಗಿ, ಶಾವಂತಗೇರಾ, ಹೀರೆರಾಯಕುಂಪಿ, ಯಾಟಗಲ್, ಕರ್ಕಿಹಳ್ಳಿ ಹಾಗೂ ಕೊಪ್ಪರ ಗ್ರಾಮಗಳಲ್ಲಿ ಮಳೆಯ ಅಭಾವದಿಂದ ಒಣಗುತ್ತಿರುವ ಹತ್ತಿ, ತೊಗರಿ ಹಾಗೂ ಸಜ್ಜೆ ಬೆಳೆಗಳ ಕ್ಷೇತ್ರವನ್ನು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಶನಿವಾರ ವೀಕ್ಷಣೆ ಮಾಡಿದರು.

ಬೆಳೆ ಒಣಗುತ್ತಿರುವ ಕ್ಷೇತ್ರಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಹನಿ ಹಾಗೂ ತುಂತುರು ನೀರಾವರಿ ಪದ್ಧತಿ ಅಳವಡಿಸಿದ ಕ್ಷೇತ್ರಗಳನ್ನು ವೀಕ್ಷಿಸಿ, ನೀರಿನ ಅಭಾವವಿದ್ದಾಗ ನೀರಿನ ಉಳಿತಾಯ ಮಾಡಿ, ಬೆಳೆ ಉತ್ಪಾದನೆ ಹೆಚ್ಚಿಸಲು ರೈತರು ಹನಿ ಹಾಗೂ ತುಂತುರು ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನರೇಗಾ ಯೋಜನೆಯಡಿ ಕೃಷಿ ಹೊಂಡ, ಬದು ನಿರ್ಮಾಣ ಸೇರಿದಂತೆ ಇತರೆ ಕಾಮಗಾರಿಗಳನ್ನು ತೆಗೆದುಕೊಳ್ಳಲು, ರೈತ ಕುಟುಂಬಗಳಿಗೆ ಉದ್ಯೋಗ ನೀಡಲು 100 ಮಾನವ ದಿನಗಳನ್ನು ಸೃಜಿಸಲು ಕಂದಾಯ ನಿರೀಕ್ಷಕರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಲಿನ್ ಅತುಲ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಹಾಗೂ ದೇವದುರ್ಗ ತಾಲ್ಲೂಕಿನ ಕೃಷಿ ಅಧಿಕಾರಿಗಳು ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !