ರಾಯಚೂರು: ತಾಲ್ಲೂಕಿನ ರಬ್ಬನಕಲ್ ಗ್ರಾಮದ ಬಾಣಂತಿ ಈಶ್ವರಿ (32) ಶುಕ್ರವಾರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.

ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರು ತಾಲ್ಲೂಕಿನ ಮಟಮಾರಿ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಈಶ್ವರಿ ಅವರಿಗೆ ಹೆರಿಗೆ ಆಗಿತ್ತು. ಬಳಿಕ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಮೂರು ದಿನಗಳ ನಂತರ ಮನೆಯಲ್ಲಿ ರಕ್ತಸ್ರಾವ ಉಂಟಾಗಿದೆ ಎಂದು ಶುಕ್ರವಾರ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವೇ ಗಂಟೆಗಳಲ್ಲಿ ಅವರು ಸಾವನ್ನಪ್ಪಿದ್ದಾರೆ.

‘ಮಟಮಾರಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ಹೆರಿಗೆ ಆಗಿದೆ. ಎರಡು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮನೆಗೆ ಹೋದೆವು. ಮನೆಗೆ ಹೋದಾಗ ರಕ್ತಸ್ರಾವ ಸಮಸ್ಯೆ ಕಾಣಿಸಿಕೊಂಡಿದೆ. ನಂತರ ಮತ್ತೆ ಮಟಮಾರಿ ಆಸ್ಪತ್ರೆಗೆ ಬಂದಾಗ ವೈದ್ಯರು ಇಲ್ಲದೆ ಸಮಸ್ಯೆ ಎದುರಾಯಿತು. ತಕ್ಷಣ ಆಂಬುಲೆನ್ಸ್ ಮೂಲಕ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ. ನಾವು ಏನೂ ಮಾಡೋಕೆ ಆಗಲ್ಲ ಎಂದು ಬರೆಸಿಕೊಂಡು ಚಿಕಿತ್ಸೆ ನೀಡಿದರು. ಸ್ವಲ್ಪ ಹೊತ್ತಲ್ಲೇ ಸಾವನ್ನಪ್ಪಿದ್ದಾಳೆ’ ಎಂದು ಮೃತ ಮಹಿಳೆಯ ಸಂಬಂಧಿ ಚರಣರಾಜ್ ತಿಳಿಸಿದರು.

ಮೃತರಿಗೆ ಮೂವರು ಮಕ್ಕಳಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.