ದೇವದುರ್ಗ: ‘ಭ್ರಷ್ಟಾಚಾರದ ವಿರುದ್ಧ ಮಾತನಾಡುವ ತಾಲ್ಲೂಕಿನ ಹೋರಾಟಗಾರರಿಗೆ ಶಾಸಕಿ ಕರೆಮ್ಮ ಜಿ. ನಾಯಕ ಅವರು ತಮ್ಮ ಬೆಂಬಲಿಗರಿಂದ ಕೊಲೆ ಬೆದರಿಕೆ ಹಾಕಿಸುತ್ತಿದ್ದಾರೆ’ ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ ವೆಂಕನಗೌಡ ನಾಯಕ ಆರೋಪಿಸಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ‘ಅನ್ಯಾಯವನ್ನು ಪ್ರಶ್ನಿಸಿದ್ದರೆ ಕೊಲೆ ಬೆದರಿಕೆ ಹಾಕುವ ಶಾಸಕಿ ಹೋರಾಟದ ಹಾದಿಯಿಂದಲೇ ಅಧಿಕಾರದ ಗದ್ದಿಗೆ ಹಿಡಿದ್ದಾರೆ. ಹೋರಾಟದ ಇತಿಹಾಸವನ್ನು ಮರೆತಿದ್ದಾರೆ. ಬೆದರಿಕೆಗೆ ನಾವು ಹೆದರುವುದಿಲ್ಲ. ಭ್ರಷ್ಟಾಚಾರ, ಅನ್ಯಾಯ, ದೌರ್ಜನ್ಯಗಳ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ. ಬೆದರಿಸುವವರ ವಿರುದ್ಧ ಕಾನೂನು ಹೋರಾಟ ಮಾಡುತ್ತೆವೆ’ ಎಂದು ತಿಳಿಸಿದರು

ಭೀಮ್ ಆರ್ಮಿ ತಾಲ್ಲೂಕು ಅಧ್ಯಕ್ಷ ವಿಶ್ವನಾಥ ಬಲ್ಲಿದವ ಮಾತನಾಡಿ, ‘ಕೊಲೆ ಬೆದರಿಕೆ ಹಾಕಿದವರ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮುಂದುವರಿಯುತ್ತದೆ’ ಎಂದರು.

ಮೋಹನ ಬಲ್ಲಿದವ, ಕ್ರಾಂತಿಕುಮಾರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.