ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಯಂತಿಗಳ ಅರ್ಥಪೂರ್ಣ ಆಚರಣೆಗೆ ರಾಯಚೂರು ಜಿಲ್ಲಾಡಳಿತ ನಿರ್ಧಾರ

ಶಿವಯೋಗಿ ಸಿದ್ದರಾಮ, ವೇಮನ, ಅಂಬಿಗರ ಚೌಡಯ್ಯ ಜಯಂತಿ
Published 5 ಜನವರಿ 2024, 15:45 IST
Last Updated 5 ಜನವರಿ 2024, 15:45 IST
ಅಕ್ಷರ ಗಾತ್ರ

ರಾಯಚೂರು: ಶಿವಯೋಗಿ ಸಿದ್ದರಾಮ, ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯಕ ಸಭೆ ನಡೆಸಿದರು. ಮಹಾ ಪುರುಷರ ಜಯಂತಿ ಕಾರ್ಯಕ್ರಮಕ್ಕೆ ಸಾಹಿತಿ ಅಥವಾ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಉಪನ್ಯಾಸ ಆಯೋಜಿಸಲು ಒಪ್ಪಿಗೆ ಸೂಚಿಸಲಾಯಿತು.

ಜ.15ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸಿದ್ದರಾಮೇಶ್ವರ ವೃತ್ತದಿಂದ ಶಿವಯೋಗಿ ಸಿದ್ದರಾಮರ ಭಾವಚಿತ್ರ ಮೆರವಣಿಗೆ ನಡೆಸಲು ಹಾಗೂ ಕನ್ನಡ ಭವನದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಯಿತು.

ಜ.19ರಂದು ಜಿಲ್ಲಾಡಳಿತದಿಂದ ಮಹಾಯೋಗಿ ವೇಮನ ಜಯಂತಿ ಆಚರಿಸಲು ಕೈಗೊಳ್ಳಬೇಕಾದ ಸಿದ್ದತೆಗಳ ಕುರಿತು ಚರ್ಚಿಸಲಾಯಿತು. ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಬಸವೇಶ್ವರ ವೃತ್ತದಿಂದ ನಗರದ ಕನ್ನಡ ಭವನದ ವರೆಗೆ ಮೆರವಣಿಗೆ ನಡೆಸಲು ಹಾಗೂ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಯಿತು.

ಜ.21ರಂದು ಅಂಬಿಗರ ಚೌಡಯ್ಯ ಜಯಂತಿಯನ್ನೂ ಸಹ ಅಚ್ಚುಕಟ್ಟಾಗಿ ಆಚರಿಸಲು ನಿರ್ಧರಿಸಲಾಯಿತು. ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಅಂಬಿಗರ ಚೌಡಯ್ಯ ವೃತ್ತದಲ್ಲಿ ಅಂಬಿಗರ ಚೌಡಯ್ಯ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಮಹಿಳಾ ಸಮಾಜದವರೆಗೆ ಮೆರವಣಿಗೆ ಮೂಲಕ ಆಗಮಿಸಿ ನಂತರ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಸರಿಯಾದ ರೀತಿಯಲ್ಲಿ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಲಾಯಿತು. ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲು ಮತ್ತು ಕಡ್ಡಾಯವಾಗಿ ಗ್ರಾಮ ಪಂಚಾಯಿತಿ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲೂ ಕಾರ್ಯಕ್ರಮ ನಡೆಸಬೇಕು ಎಂದು ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಸೇರುವಂತೆ ಮಾಡಬೇಕು. ಎಲ್ಲರಿಗೂ ಮುಂಚೆಯೇ ಆಹ್ವಾನ ನೀಡಬೇಕು ಸಭೆಯ ಮೂಲಕ ಮನವಿ ಮಾಡಲಾಯಿತು.

ನಗರಸಭೆ ಅಧಿಕಾರಿ ರಾಜು, ಶಕಿಲ್, ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರಾದ ಶಶಿಕಲಾ ಭೀಮರಾಯ, ಹನುಮಂತು, ವೀರಯ್ಯ, ಶ್ರೀನಿವಾಸ, ದೊಡ್ಡಪ್ಪ, ನಾಗರಾಜ, ರವಿಕುಮಾರ, ಈರಣ್ಣ, ಸಮಾಜದ ಮುಖಂಡರಾದ ಸುಧಾಕರ ರೆಡ್ಡಿ, ಡಿ.ಅಚ್ಯುತ್ ರೆಡ್ಡಿ, ಲಕ್ಷ್ಮಿಕಾಂತ ರೆಡ್ಡಿ, ನರಸಿಂಹ ರೆಡ್ಡಿ,ರಾಧಕೃಷ್ಣ ರೆಡ್ಡಿ, ರಾಘವೇಂದ್ರ ರೆಡ್ಡಿ, ಕೆ.ಶಾಂತಪ್ಪ, ಶರಣಪ್ಪ ಕಲ್ಮಲಾ, ಕಡಗೋಲ ಶರಣಪ್ಪ, ಪ್ರಕಾಶ, ಕಡಗೋಲ ರಾಮಚಂದ್ರ, ಬಿಮಲ್ಲೇಶ, ಕುರ್ಡಿ ನರಸಪ್ಪ, ಕೆ.ಆನಂದ, ಪ್ರಭು, ಕಡಗೋಲ ಚೇತನಕುಮಾರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT