ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

7ನೇ ವೇತನ ಆಯೋಗ ಶಿಫಾರಸು ಜಾರಿಗೆ ಆಗ್ರಹಿಸಲು ತೀರ್ಮಾನ

Published 8 ಜನವರಿ 2024, 15:05 IST
Last Updated 8 ಜನವರಿ 2024, 15:05 IST
ಅಕ್ಷರ ಗಾತ್ರ

ಸಿಂಧನೂರು: ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಿಸುವ ಹಿನ್ನೆಲೆಯಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ತರುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಲು ಕರ್ನಾಟಕ ರಾಜ್ಯ ನೌಕರರ ಸಂಘದ ರಾಜ್ಯ ಘಟಕದ ತೀರ್ಮಾನಿಸಿದೆ ಎಂದು ಸಿಂಧನೂರು ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಹಿರೇಮಠ ತಿಳಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅಧ್ಯಕ್ಷತೆಯಲ್ಲಿ ಮಂಡ್ಯದಲ್ಲಿ ಜರುಗಿದ ರಾಜ್ಯ ಕಾರ್ಯಕಾರಣಿಯಲ್ಲಿ ಈ ನಿರ್ಣಯ ಅಂಗೀಕರಿಸಲಾಗಿದೆ ಎಂದು ಸೋಮವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘2006ರ ನಂತರ ನೇಮಕಾತಿ ಹೊಂದಿದ ನೌಕರರಿಗೆ ನೂತನ ಪಿಂಚಣಿ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ’ ಎಂದಿದ್ದಾರೆ.

‘ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹಾಕಲು ಶೀಘ್ರದಲ್ಲಿ ರಾಜ್ಯ ಘಟಕದಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು. ಅಲ್ಲದೇ, ಜ.20ರೊಳಗೆ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳು, ವೃಂದ ಸಂಘಗಳು ಸೇರಿ ಸ್ಥಳೀಯ ಸಂಸದ ಹಾಗೂ ಶಾಸಕರಿಗೆ ಮನವಿ ಸಲ್ಲಿಸಬೇಕು. ಅದಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಮತ್ತೊಂದು ರಾಜ್ಯ ಕಾರ್ಯಕಾರಣಿ ಕರೆದು ಮುಂದಿನ ಹೋರಾಟಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT