ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನ್ವಿ: ₹ 35 ಸಾವಿರ ಪರಿಹಾರ ಘೋಷಿಸಿ- ಶಾಸಕ ರಾಜಾ ವೆಂಕಟಪ್ಪ ನಾಯಕ

Last Updated 27 ನವೆಂಬರ್ 2021, 12:58 IST
ಅಕ್ಷರ ಗಾತ್ರ

ಮಾನ್ವಿ: ತಾಲ್ಲೂಕಿನಲ್ಲಿ ಈಚೆಗೆ ಸುರಿದ ಅಕಾಲಿಕ ಮಳೆಯಿಂದ ಬೆಳೆ ಹಾನಿಗೀಡಾದ ಜಮೀನುಗಳಿಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಸರ್ಕಾರದ ವತಿಯಿಂದ ಅಗತ್ಯ ಪರಿಹಾರ ದೊರಕಿಸಿಕೊಡಲು ಶ್ರಮಿಸುವುದಾಗಿ ಅವರು ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಆತ್ಮಸ್ಥೈರ್ಯ ತುಂಬಿ ಮಾತನಾಡಿದರು.

‘ಈಚೆಗೆ ಸುರಿದ ಮಳೆಯಿಂದ ಮಾನ್ವಿ ತಾಲ್ಲೂಕಿನಲ್ಲಿ 6,435 ಎಕರೆ ಹಾಗೂ ಸಿರವಾರ ತಾಲ್ಲೂಕಿನ 2,158ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತಕ್ಕೆ ಹಾನಿಯಾಗಿದೆ. ಸರ್ಕಾರ ಕೂಡಲೇ ಪ್ರತಿ ಎಕರೆಗೆ ₹ 35ಸಾವಿರ ಪರಿಹಾರ ಘೋಷಿಸಬೇಕು. ಹತ್ತಿ ಮತ್ತು ತೊಗರಿ ಬೆಳೆಗಳು ಕೂಡ ಹಾನಿಗೊಳಗಾಗಿದ್ದು ಹತ್ತಿಗೆ ಪ್ರತಿ ಎಕರೆಗೆ ₹ 25ಸಾವಿರ, ತೊಗರಿ ಪ್ರತಿ ಎಕರೆಗೆ ₹ 15ಸಾವಿರ ಹಾಗೂ ಮೆಣಸಿನಕಾಯಿಗೆ ಪ್ರತಿ ಎಕರೆಗೆ ₹ 10 ಸಾವಿರ ಪರಿಹಾರ ಧನ ನೀಡಬೇಕು’ ಎಂದು ಒತ್ತಾಯಿಸಿದರು.

ಬೆಳೆಹಾನಿಯ ಸಮರ್ಪಕ ವರದಿ ತಯಾರಿಸಿ ಕೂಡಲೇ ಸರ್ಕಾರಕ್ಕೆ ಸಲ್ಲಿಸಲು ಅವರು ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜೆಡಿಎಸ್ ಪಕ್ಷದ ಮುಖಂಡರಾದ ರಾಜಾ ರಾಮಚಂದ್ರನಾಯಕ, ಮಲ್ಲಿಕಾರ್ಜುನ ಪಾಟೀಲ್, ಇಬ್ರಾಹಿಂ ಬಾಷಾ, ಹನುಮಂತ ಭೋವಿ, ಅಮರೇಶಗೌಡ, ಪಂಪನಗೌಡ, ಬಸನಗೌಡ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT