ಮಸ್ಕಿ: ದೀಪಾವಳಿ ಹಿನ್ನೆಲೆಯಲ್ಲಿ ಹಳೆ ಬಸ್ ನಿಲ್ದಾಣದ ರಾಷ್ಟ್ರೀಯ ಹೆದ್ದಾರಿ 150 (ಎ) ಕಳೆದ ಎರಡು ದಿನಗಳಿಂದ ಮಾರುಕಟ್ಟೆಯಾಗಿ ಮಾರ್ಪಟ್ಟಿದೆ. ವಾಹನ ಸವಾರರು ಹರಸಾಹಸ ಪಡುವಂತಾಗಿದೆ.
ಅಶೋಕ ವೃತ್ತದಿಂದ ಕನಕ ವೃತ್ತದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಹೂವು, ಹಣ್ಣು, ಬಾಳೆ ದಿಂಡು ಸೇರಿದಂತೆ ಪೂಜೆಗೆ ಬೇಕಾದ ವಸ್ತುಗಳನ್ನು ಮಾರಾಟಕ್ಕೆ ಇಟ್ಟಿದ್ದರಿಂದ ಈ ಮಾರ್ಗವಾಗಿ ಬೆಂಗಳೂರು, ಬಳ್ಳಾರಿ, ಕಲಬುರಗಿ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಗೆ ತೆರಳುತ್ತಿರುವ ಸಾರಿಗೆ ಸಂಸ್ಥೆಯ ಬಸ್‌ಗಳು ನಡು ರಸ್ತೆಯಲ್ಲಿಯೇ ಪ್ರಯಾಣಿಕರನ್ನು ಏರಿಸುವುದು ಇಳಿಸುವುದು ಮಾಡುತ್ತಿದ್ದರಿಂದ ವಾಹನ ದಟ್ಟಣೆ ಉಂಟಾಯಿತು.
ಬೈಕ್ ಸವಾರರು ರಸ್ತೆ ದಾಟಲು ಪ್ರಯಾಸ ಪಟ್ಟರೆ, ಮಹಿಳೆಯರು, ಮಕ್ಕಳು ಸೇರಿದಂತೆ ಸಾರ್ವಜನಿಕರು ಜೀವ ಕೈಯಲ್ಲಿಡಿದು ರಸ್ತೆ ದಾಟುವಂಥ ಪರಿಸ್ಥಿತಿ ನಿರ್ಮಾಣವಾಯಿತು.
ಸಾರ್ವಜನಿಕರು ಪೊಲೀಸ್ ಇಲಾಖೆ ಹಾಗೂ ಪುರಸಭೆ ವಿರುದ್ಧ ಆಕ್ರೋಶ ಹೊರಹಾಕಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.