ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೋಮುವಾದಿ ಬಿಜೆಪಿ ಸೋಲಿಸಿ’ 

Published 27 ಏಪ್ರಿಲ್ 2024, 15:31 IST
Last Updated 27 ಏಪ್ರಿಲ್ 2024, 15:31 IST
ಅಕ್ಷರ ಗಾತ್ರ

ಸಿಂಧನೂರು: ಸಿಪಿಐಎಂಎಲ್ ಲಿಬರೇಶನ್ ವತಿಯಿಂದ ‘ಕೋಮುವಾದಿ ಬಿಜೆಪಿ ಸೋಲಿಸಿ, ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಿ’ ಪ್ರಚಾರ ಆಂದೋಲನ ನಡೆಸಲಾಯಿತು.

ರಾಜ್ಯ ಘಟಕದ ಕಾರ್ಯದರ್ಶಿ ಕ್ಲಿಫ್ಟನ್ ಡಿ.ರೊಜೊರಿಯೋ ಮಾತನಾಡಿ,‘ಜನವಿರೋಧಿ, ಜನದ್ರೋಹಿ ಹಾಗೂ ಸಂವಿಧಾನ ವಿರೋಧಿ ಬಿಜೆಪಿ ಆಡಳಿತ ವೈಫಲ್ಯದ ವಿರುದ್ಧ ಕೊಪ್ಪಳ ಲೋಕಸಭಾ ಕ್ಷೇತ್ರದಾದ್ಯಂತ ಚುನಾವಣಾ ಜನಜಾಗೃತಿ ಆಂದೋಲನ ನಡೆಯಲಿದೆ. ಜನಸಾಮಾನ್ಯರಲ್ಲಿ ಭಾವನಾತ್ಮಕ ವಿಚಾರಗಳನ್ನು ಕೆರಳಿಸಿ ಪರಸ್ಪರ ಒಡೆದಾಳುವ ಮೂಲಕ ದೇಶದ ನೆಲ, ಜಲ, ಸಂಪತ್ತನ್ನು ಕಾರ್ಪೊರೇಟ್ ಕಂಪನಿಗಳಿಗೆ ಲೂಟಿ ಹೊಡೆಯಲು ಮುಕ್ತ ಅವಕಾಶ ನೀಡಿರುವ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಬೇಕು. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸಬೇಕು’ ಎಂದು ಹೇಳಿದರು.

ಸಿಪಿಐಎಂಎಲ್ ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ್ ಮಾತನಾಡಿದರು.

ಮುಖಂಡರಾದ ಬಸವರಾಜ ಬೆಳಗುರ್ಕಿ, ಆರ್.ಎಚ್.ಕಲಮಂಗಿ, ಬಸವರಾಜ ಕೊಂಡೆ, ಚಾಂದ್ ಪಾಷಾ ಬೆಳ್ಳಿಗನೂರು, ಹನುಮಂತ ದೀನಸಮ್ರುದ, ಬಸವರಾಜ ಹಿರೇದಿನ್ನಿ, ರಾಮಣ್ಣ ನಾಯಕ, ಪರುಶುರಾಮ ಭಂಡಾರಿ, ಮಹಾದೇವ, ಪಂಪಾಪತಿ ಬೆಳಗುರ್ಕಿ, ಬಸವರಾಜ, ಹನುಮಂತ ಟೈಲರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT