ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪರೀಕ್ಷೆ ವರದಿ ವಿಳಂಬ: ಪರದಾಟ

Last Updated 20 ಏಪ್ರಿಲ್ 2021, 11:03 IST
ಅಕ್ಷರ ಗಾತ್ರ

ಮುದಗಲ್: ಕೋವಿಡ್‌ ಪರೀಕ್ಷೆ ವರದಿ ವಿಳಂಬವಾಗುತ್ತಿರುವ ಕಾರಣ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.

ವಿದ್ಯಾರ್ಥಿಗಳು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆಗೆ ಒಳಪಟ್ಟು ಆರು ದಿನ ಕಳೆದರೂ ಫಲಿತಾಂಶ ಬಂದಿಲ್ಲ.

ಯುಗಾದಿ ಪ್ರಯುಕ್ತ ಮನೆಗೆ ತೆರಳಿದ ವಿದ್ಯಾರ್ಥಿಗಳಿಗೆ ಮರಳಿ ಬರುವಾಗ ಕೋವಿಡ್ ವರದಿ ತರಬೇಕು ಎಂದು ಸೂಚಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗಲು ಆಗುತ್ತಿಲ್ಲ. ನಿತ್ಯ ಮನೆ ಮತ್ತು ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಲೆಯುವಂತಾಗಿದೆ.

ಫಲಿತಾಂಶ ವಿಳಂಬಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಸ್ಎಫ್ಐ ಆಗ್ರಹಿಸಿದೆ.

‘ಕೋವಿಡ್‌ ಟೆಸ್ಟ್‌ ಕಿಟ್‌ಗಳನ್ನು ಜಿಲ್ಲಾ ಕೇಂದ್ರಕ್ಕೆ ಸಾಗಿಸಲು ವಾಹನದ ಕೊರತೆ ಇತ್ತು. ನಿನ್ನೆ ನಡೆದ ಸಭೆಯಲ್ಲಿ ಇದರ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಅವರು ವಾಹನ ಸೌಲಭ್ಯ ಕಲ್ಪಿಸುತ್ತೇವೆ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಶೀಘ್ರವೇ ವರದಿ ನೀಡುತ್ತೇವೆ’ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅನಂತ ಕುಮಾರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT