ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು: ‘₹4.95 ಕೋಟಿ ವೆಚ್ಚದ ರಸ್ತೆ ಕಾಮಗಾರಿ ನನೆಗುದಿಗೆ

Published 24 ಮೇ 2024, 13:44 IST
Last Updated 24 ಮೇ 2024, 13:44 IST
ಅಕ್ಷರ ಗಾತ್ರ

ರಾಯಚೂರು: ‘ದೇವದುರ್ಗ ತಾಲ್ಲೂಕು ಗಬ್ಬೂರಿನಿಂದ (ಖಾನಾಪುರ ಕ್ರಾಸ್) ಮದರಕಲ್‍ವರೆಗೆ ₹4.95 ಕೋಟಿ ವೆಚ್ಚದಲ್ಲಿ ಕೈಗೊಂಡ ರಸ್ತೆ ಕಾಮಗಾರಿ ಒಂದೂವರೆ ವರ್ಷದಿಂದ ನನೆಗುದಿಗೆ ಬಿದ್ದಿದೆ. ಕೂಡಲೇ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ದೇವದುರ್ಗ ತಾಲ್ಲೂಕು ಘಟಕದ ಅಧ್ಯಕ್ಷ ಶಾಂತಕುಮಾರ ಹೊನ್ನಟಗಿ ಒತ್ತಾಯಿಸಿದರು. 

2021-22ನೇ ಸಾಲಿನ ಲೆಕ್ಕ ಶೀರ್ಷಿಕೆ 50-54ರ ಯೋಜನೆಯಡಿ ಸುಸಜ್ಜಿತ ರಸ್ತೆ ನಿರ್ಮಿಸಲು ₹4.95 ಕೋಟಿ  ಮಂಜೂರಾಗಿತ್ತು. ಗುತ್ತಿಗೆದಾರ ವೆಂಕಟೇಶ ಯಾದವ್ ಅರೆಬರೆ ಕಾಮಗಾರಿ ಮಾಡಿದ್ದಾರೆ. ಒಂದೂವರೆ ವರ್ಷ ಕಳೆದರೂ ಕೆಲಸ ಮುಗಿದಿಲ್ಲ. ಕೇವಲ ಕಚ್ಚಾ ಸಾಮಗ್ರಿ ಹಾಕಿ ಕೈ ತೊಳೆದುಕೊಂಡಿದ್ದಾರೆ. ರಸ್ತೆ ಸಂಪೂರ್ಣ ಹದಗೆಟ್ಟಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಗುರುವಾರ ಮಾಧ್ಯಮಗೋಷ್ಠಿಯಲ್ಲಿ ದೂರಿದರು. 

ಲೋಕೋಪಯೋಗಿ ಇಲಾಖೆಯಿಂದ ಗುತ್ತಿಗೆದಾರರನಿಗೆ ನೋಟಿಸ್ ಕೂಡ ನೀಡಲಾಗಿತ್ತು. ಯಾವುದೇ ಕ್ರಮ ಜರುಗಿಸಿಲ್ಲ.  ಜಿಲ್ಲಾಧಿಕಾರಿ  ಕೂಡಲೇ ಮಧ್ಯಪ್ರವೇಶಿಸಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ರಸ್ತೆಗೆ ಮರು ಡಾಂಬರೀಕರಣ ಮಾಡಿಸಬೇಕು ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. 

ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ನರಸಪ್ಪ ಎನ್.ಗಣೇಕಲ್, ಮುತ್ತುರಾಜ ಮ್ಯಾತ್ರಿ, ಈಶಪ್ಪ ಮದರಕಲ್, ಹುಲಿಗೆಪ್ಪ, ಮಾರ್ತಂಡ, ಮಲ್ಲಯ್ಯ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT