ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನ್ವಿ: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮನವಿ

ಮಾನ್ವಿ: ಎಐಡಿಎಸ್‌ಒ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
Last Updated 23 ಡಿಸೆಂಬರ್ 2021, 14:15 IST
ಅಕ್ಷರ ಗಾತ್ರ

ಮಾನ್ವಿ: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಹತ್ತು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ನಿರತರಾಗಿದ್ದಾರೆ.

ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವವರೆಗೂ ಹೋರಾಟ ಮುಂದುವರಿಸುವ ನಿರ್ಧಾರವನ್ನು ತಿಳಿಸಿದ್ದಾರೆ. ಕಾರಣ ಈಗ ಉಪನ್ಯಾಸಕರಿಲ್ಲದೆ ಕಾಲೇಜಿನಲ್ಲಿ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದಾಗಿ ವಿದ್ಯಾರ್ಥಿಗಳಿಗೆ ವಿಷಯಗಳ ಬಗ್ಗೆ ಸ್ಪಷ್ಟವಾದ ಮಾಹಿತಿ ದೊರೆತಿಲ್ಲ.

ಪದವಿ ಪ್ರಥಮ ಸೆಮಿಸ್ಟರ್‌ನ ಕೆಲವು ವಿಷಯಗಳಿಗೆ ಪಠ್ಯ ಪುಸ್ತಕಗಳು ಲಭ್ಯವಿಲ್ಲ. ಇಂತಹ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಮುಷ್ಕರ ಆರಂಭವಾಗಿರುವುದು ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ತೊಂದರೆಯಾಗಿದೆ. ಕಾರಣ ರಾಜ್ಯ ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳಿಗೆ ಎಲ್ಲಾ ತರಗತಿಗಳು ನಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವುದನ್ನು ಕೈಬಿಡಬೇಕು ಎಂದು ವಿದ್ಯಾರ್ಥಿ ಮುಖಂಡರು ಒತ್ತಾಯಿಸಿದರು.

ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ್ ಪರಶುರಾಮ ಅವರಿಗೆ ಸಲ್ಲಿಸಲಾಯಿತು. ಎಐಡಿಎಸ್‌ಒ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಪೀರ್ ಸಾಬ್, ವಿದ್ಯಾರ್ಥಿ ಮುಖಂಡರಾದ ಸೈಯದ್, ಕಾರ್ತಿಕ, ಕರೀಮ್, ವೀರೇಶ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT