ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾ. ನಾಗಮೋಹನದಾಸ್ ವರದಿ ಜಾರಿಗೆ ಆಗ್ರಹ

Last Updated 11 ಸೆಪ್ಟೆಂಬರ್ 2022, 12:39 IST
ಅಕ್ಷರ ಗಾತ್ರ

ಮಸ್ಕಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನಕ್ಕೆ ಮೀಸಲಾತಿ ಹೆಚ್ಚಿಸುವ ಸಂಬಂಧ ನ್ಯಾಯಮೂರ್ತಿ ನಾಗಮೋಹನದಾಸ ವರದಿ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಶಾಸಕ ಆರ್. ಬಸನಗೌಡ ಹಾಗೂ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರಿಗೆ ಎಸ್ಸಿ, ಎಸ್ಟಿ ಮೀಸಲಾತಿ ಹೋರಾಟ ಸಮಿತಿ ಶನಿವಾರ ಮನವಿ ಸಲ್ಲಿಸಿ ಆಗ್ರಹಿಸಿತು.

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ 213 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. 2011 ರ ಜನಗಣತಿ ಪ್ರಕಾರ ಪರಿಶಿಷ್ಟ ಜಾತಿಗೆ ಶೇ 17.15 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ 7.5 ರಷ್ಟು ಮೀಸಲಾತಿ ಹೆಚ್ಚಳವಾಗಬೇಕು. ಆದರೆ, ಇದುವರೆಗೂ ಸರ್ಕಾರ ಮೀಸಲಾತಿ ಹೆಚ್ಚಿಸಿಲ್ಲ ಎಂದರು.

ಮೀಸಲಾತಿ ಜಾರಿ ಸಂಬಂಧ ಮುಖ್ಯಮಂತ್ರಿ ಹಾಗೂ ಸಂಪುಟದ ಸದಸ್ಯರ ಮೇಲೆ ಒತ್ತಡ ಹಾಕುವ ಜೊತೆಗೆ ಬರುವ ಅಧಿವೇಶನದಲ್ಲಿ ವಿಷಯ ಪ್ರಸ್ಥಾಪಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಪ್ರಸನ್ನ ಪಾಟೀಲ್, ರಾಮಣ್ಣ ವಕೀಲ, ಮೌನೇಶ ನಾಯಕ, ಭೀಮಣ್ಣ ಕಾಚಾಪೂರ, ಬಸವರಾಜ ನಾಯಕ ತುಗ್ಗಲದಿನ್ನಿ, ಮಣಿಕಂಠನಾಯಕ, ಚಂದ್ರಶೇಖರ ನಾಯಕ, ಗೋವಿಂದಪ್ಪ ನಾಯಕ ರಂಗಾಪೂರ, ಮಲ್ಲಯ್ಯ ಮಲ್ಕಾಪೂರ, ಆರ್.ಕೆ. ನಾಯಕ, ವೆಂಕಟೇಶ ನಾಯಕ ಮಂಗನಾಳ, ಸಂತೋಷ ಪಾಟೀಲ್, ವೆಂಕೋಬ ನಾಯಕ ಮಲ್ಲದಗುಡ್ಡ, ರಾಘವೇಂದ್ರ ನಾಯಕ ಜಾಲವಾಡಗಿ, ಬಸವರಾಜ ನಾಯಕ ರಂಗಾಪೂರ, ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಪದಾಧಿಕಾರಿಗಳು ಸೇರಿದಂತೆ ಎಸ್ಸಿ ಹಾಗೂ ಎಸ್ಟಿ ಜನಾಂಗದ ಮುಖಂಡರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT