ರಾಯಚೂರು: ಅಪಾಯದ ಅಂಚಿನಲ್ಲಿರುವ ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ತ್ವರಿತವಾಗಿ ಸ್ಥಳಾಂತರ ಮಾಡಬೇಕೆಂದು ಒತ್ತಾಯಿಸಿ ವಿಶ್ವ ಮಾನವ ಹಕ್ಕುಗಳ ಸಂಘದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಲವು ದಶಕಗಳ ಹಿಂದೆ ನಿರ್ಮಾಣವಾದ ಕಟ್ಟಡ ಶಿಥಿಲಗೊಂಡಿದೆ. ಚಾವಣಿ ಬೀಳುವ ಆತಂಕ ಎದುರಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರಗಳು ಇಲಾಖೆಯಲ್ಲಿ ಇವೆ. ಇವೆಲ್ಲವನ್ನೂ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಮಳೆಗಾಲ ಆರಂಭವಾಗಿದೆ. ದುರಸ್ತಿ ಮಾಡದೇ ಇರುವುದರಿಂದ ಚಾವಣಿ ಸೋರುತ್ತಿದೆ. ಇದರಿಂದ ಸಿಬ್ಬಂದಿ ಆತಂಕದಲ್ಲಿ ಕೆಲಸ ಮಾಡುವ ಪರಿಸ್ಥಿತಿ ಇದೆ. ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ಸಂಭಂದಿಪಟ್ಟ ಅಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದರು.

ವಿಶ್ವ ಮಾನವ ಹಕ್ಕುಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನರಸಪ್ಪ, ಪವನ ಪಾಟೀಲ, ಕೆ. ರಂಗನಾಥ, ಎಂ. ಕೆ. ನರೇಂದ್ರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.