ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿರವಾರ: ನೀರು ಶುದ್ಧೀಕರಣ ಘಟಕ ದುರಸ್ತಿಗೆ ಒತ್ತಾಯ

Published 27 ಜೂನ್ 2024, 15:40 IST
Last Updated 27 ಜೂನ್ 2024, 15:40 IST
ಅಕ್ಷರ ಗಾತ್ರ

ಸಿರವಾರ: ತಾಲ್ಲೂಕಿನ ಶಾಖಾಪೂರು ಗ್ರಾಮದ ಶುದ್ಧೀಕರಣವನ್ನು ದುರಸ್ತಿ ಮಾಡಿಸಲು ಒತ್ತಾಯಿಸಿ ಕರವೇ (ಪ್ರವೀಣ ಶೆಟ್ಟಿ) ಬಣದ ಪದಾಧಿಕಾರಿಗಳು ತಾಲ್ಲೂಕು ಪಂಚಾಯಿತಿ ಇಒ ಶಶಿಧರ ಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

‘ಅತ್ತನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಖಾಪೂರು ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರಾರಂಭದಿಂದಲೂ ದುರಸ್ತಿ ನೆಪದಲ್ಲಿ ಬಂದ್ ಮಾಡಲಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದದರೂ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ದುರಸ್ತಿ ನೆಪದಲ್ಲಿ ಅಧಿಕಾರಿಗಳು ಅನುದಾನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದ ಅವರು, ‘ಮೇಲಧಿಕಾರಿಗಳು ನಮ್ಮ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಲಾಯಿತು.

ಕರವೇ ಶಾಖಾಪೂರು ಗ್ರಾಮ ಘಟಕದ ಅಧ್ಯಕ್ಷ ಹನುಮೇಶ ನಾಯಕ, ತಾಲ್ಲೂಕು ಘಟಕದ ಅಧ್ಯಕ್ಷ ಕೆ.ರಾಘವೇಂದ್ರ, ಕಾರ್ಯಾಧ್ಯಕ್ಷ ವೆಂಕಟೇಶ್ ಶಂಕ್ರಿ, ಅಲಂಪಾಷ, ಶರಣಬಸವ, ರಮೇಶ ನಾಯಕ, ನಾಗರಾಜ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT