ಮಾನ್ವಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ದಲಿತಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಪಟ್ಟಣದಲ್ಲಿ ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಜವಾಬ್ದಾರಿಯುತ ಸ್ಥಾನದಲ್ಲಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸಿದ್ದಾರೆ. ಸರ್ಕಾರದ ಘನತೆ ಗೌರವಕ್ಕೆ ಧಕ್ಕೆ ಬರುವಂತೆ ಹೇಳಿಕೆ ನೀಡಿರುವುದು ಖಂಡನೀಯ ಎಂದು ಒಕ್ಕೂಟದ ಮುಖಂಡರು ದೂರಿದರು.

ಡಿ.ಕೆ.ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲು ಸೂಚಿಸಬೇಕು ಎಂದು ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಲಾಯಿತು.

ಒಕ್ಕೂಟದ ಮುಖಂಡರಾದ ಬಸವರಾಜ ನಕ್ಕುಂದಿ, ಪರಶುರಾಮ ಬಾಗಲವಾಡ, ಚಂದ್ರು ಜಾನೇಕಲ್, ಯಲ್ಲಪ್ಪ ಬಾದರದಿನ್ನಿ, ಚಂದ್ರು ನಾಯಕ ಮಾನ್ವಿ, ವೆಂಕಟೇಶ.ಕೆ., ಪಿ.ರವಿಕುಮಾರ, ಜಗದೀಶ ಕುರ್ಡಿ, ಶಾಂತಪ್ಪ ಮುಷ್ಟೂರು, ಸಿದ್ದಪ್ಪ ಅಮರಾವತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.