ಸಿಂಧನೂರು: ರಾಜ್ಯದ ಯುವಜನರ ಹಿತಾಸಕ್ತಿಗಳ ರಕ್ಷಣೆ ಮತ್ತು ಅವರ ಸಮಗ್ರ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಯುವ ಆಯೋಗ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ ಸಾಲಿಡಾರಿಟಿ ಯೂಥ್ ಮೂವ್ಮೆಂಟ್ ತಾಲ್ಲೂಕು ಘಟಕ ಶನಿವಾರ ಇಲ್ಲಿಯ ಮಿನಿವಿಧಾನಸೌಧ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷ ವಸೀಂ ಅಹ್ಮದ್ ಮಾತನಾಡಿ,‘ರಾಜ್ಯದಲ್ಲಿ ₹2 ಕೋಟಿಗೂ ಹೆಚ್ಚು ಯುವ ಜನರಿದ್ದು, ಅವರು ಶಿಕ್ಷಣ, ಉದ್ಯೋಗ, ಮಾನಸಿಕ ಆರೋಗ್ಯ, ಸಾಮಾಜಿಕ ಭದ್ರತೆ ಮತ್ತು ನಾಗರಿಕ ಭಾಗವಹಿಸುವಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ. ನಿರುದ್ಯೋಗ, ಮಾನಸಿಕ ಒತ್ತಡ, ಮಾದಕ ವ್ಯಸನ, ಸೈಬರ್ ವಂಚನೆ, ಸಾಮಾಜಿಕ ಅಸುರಕ್ಷತೆ ಮತ್ತು ನಿರ್ಧಾರ ಪ್ರಕ್ರಿಯೆಗಳಲ್ಲಿ ಪ್ರತಿನಿಧಿತ್ವದ ಕೊರತೆ ಮುಂತಾದ ಗಂಭೀರ ಸಮಸ್ಯೆಗಳು ಯುವಜನರಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ’ ಎಂದು ತಿಳಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಅಬುಲೈಸ್ ನಾಯ್ಕ್, ಮನುಜಮತ ಬಳಗದ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾದರ್ಲಿ, ಕೆವಿಎಸ್ ಸಂಚಾಲಕ ಚಾಂದ್ಪಾಷಾ, ಯುವ ಮುಖಂಡ ಸೋಯೆಲ್ ದೇಸಾಯಿ, ಸಂಘಟನೆಯ ತಾಲ್ಲೂಕು ಘಟಕದ ಉಪಾಧ್ಯಕ್ಷ ಇಸ್ಮಾಯಿಲ್, ಕಾರ್ಯದರ್ಶಿ ನಯಿಮ್ ಇರ್ಫಾನ್, ಸದಸ್ಯರಾದ ಮುಸ್ತಾಕ್, ಅಝರ್, ಶಬ್ಬೀರ್, ಆಸಿಫ್, ಫಾರೂಕ್, ರಿಯಾಜ್ ಹಾಗೂ ಯಾಸೀನ್ ಮುಲ್ಲಾ ಇದ್ದರು.

ಕೇರಳ ಅಸ್ಸಾಂ ಮಿಜೋರಾಂ ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಈಗಾಗಲೇ ಯುವ ಆಯೋಗಗಳು ಕಾರ್ಯನಿರ್ವಹಿಸುತ್ತಿವೆ. ಅದರಂತೆ ಕರ್ನಾಟಕ ರಾಜ್ಯದಲ್ಲೂ ಯುವ ಆಯೋಗದ ಸ್ಥಾಪನೆಗಾಗಿ ಅಗತ್ಯ ಆಡಳಿತಾತ್ಮಕ ಮತ್ತು ಶಾಸನಾತ್ಮಕ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಬೇಕು
ವಸೀಂ ಅಹ್ಮದ್ ಅಧ್ಯಕ್ಷ ಜಿಲ್ಲಾ ಘಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.