ರಾಯಚೂರು: ಪ್ರಸ್ತುತ ರಾಜ್ಯ ಬಜೆಟ್‌ನಲ್ಲಿ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಿಸಬೇಕು ಎಂದು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಜಿಲ್ಲಾ ಘಟಕ ಆಗ್ರಹಿಸಿದೆ.
ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 27,000 ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ 800 ಪ್ರೌಢಶಾಲಾ ಅತಿಥಿ ಶಿಕ್ಷಕರ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಿದ್ದು ಶ್ಲಾಘನೀಯ. ಅತಿಥಿ ಶಿಕ್ಷಕರಿಗೆ ಕಾಯಂ ನೇಮಕ ಮಾಡಿ ಕನಿಷ್ಠ ವೇತನ, ಸಿಎಲ್ ರಜೆ ನೀಡಬೇಕು. ಅತಿಥಿ ಶಿಕ್ಷಕರ ನೇಮಕದಲ್ಲಿ ಸೇವಾ ಹಿರಿತನದ ಪರಿಗಣಿಸಿ ಮೊದಲ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಶಿಕ್ಷಕರ ವರ್ಗಾವಣೆ ಹಾಗೂ ಕಾಯಂ ನೇಮಕವಾದ ಸಂದರ್ಭದಲ್ಲಿ ಅತಿಥಿ ಶಿಕ್ಷಕರನ್ನು ಕೈಬಿಡುವ ಬದಲು ಶಿಕ್ಷಕರ ಕೊರತೆ ಇರುವ ಶಾಲೆಗೆ ವರ್ಗಾಯಿಸಬೇಕು. ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಸೇವಾ ಹಿರಿತನದ ಆಧಾರದ ಮೇಲೆ ವಾರ್ಷಿಕ ಶೇ 5ರಷ್ಟು ಕೃಪಾಂಕ ನೀಡಬೇಕು. ಪ್ರತಿ ತಿಂಗಳು ವೇತನ ನೀಡಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಕೆ ನಾಗರಾಜ, ಉಪಾಧ್ಯಕ್ಷೆ ಸಲ್ಮಾ ಖಾನಂ, ರಾಮಲಿಂಗಮ್ಮ, ಶಿವಲೀಲಾ, ವಿದ್ಯಾಲಕ್ಷ್ಮಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.