ಹಟ್ಟಿ ಚಿನ್ನದ ಗಣಿ: ಗುರುಗುಂಟಾ ಹೋಬಳಿ ವ್ಯಾಪ್ತಿಯ ದೊಡ್ಡಿಗಳಿಗೆ ಸಮರ್ಪಕವಾಗಿ ವಿದ್ಯುತ್ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಗುರುಗುಂಟಾ ಜೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಗುರುಗುಂಟಾ ಹೋಬಳಿ ವ್ಯಾಪ್ತಿಗೆ ಬರುವ ದೊಡ್ಡಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಿ ಎಂದು 2017ರಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ಜನರ ಸಮಸ್ಯೆ ಬಗೆಹರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಹೋರಾಟಗಾರರು ಆಕ್ರೋಶ ವ್ಯೆಕ್ತ ಪಡಿಸಿದರು.

ಕೆಲವೊಂದು ಮನೆಗೆ ವಿದ್ಯುತ್ ಮೀಟರ್ ಅಳವಡಿಸಿದ್ದಾರೆ ಆದರೆ ವಿದ್ಯುತ್ ಸಂಪರ್ಕ ಇಲ್ಲದೆ ಜೆಸ್ಕಾಂ ಸಿಬ್ಬಂದಿ ಬಿಲ್ ನೀಡುತ್ತಿದ್ದಾರೆ. ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರು ಇತ್ತ ಕಡೆ ಗಮನಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು.

ರಾತ್ರಿ ವಿದ್ಯುತ್ ಇಲ್ಲದ ಸಮಯದಲ್ಲಿ ವಿಷ ಜಂತುಗಳು ಕಚ್ಚಿ ಆಸ್ಪತ್ರೆ ಸೇರಿದ ಘಟನೆಗಳು ನಡೆಯುತ್ತಿವೆ ಜನರ ಸಮಸ್ಯೆ ಆಲಿಸಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ದೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪ ಮಾಡಿದರು.

ವಿದ್ಯುತ್ ಸಮಸ್ಯೆ ಬಗ್ಗೆ ಹಲವು ಸಲ ದೂರು ನೀಡಿದರು ಯಾರು ಇತ್ತ ಕಡೆ ಸುಳಿಯುತ್ತಿಲ್ಲ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ನಿರ್ಲಕ್ಷ್ಯ ಮಾಡಿದರೆ ಜೆಸ್ಕಾಂ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಶಿವಪುತ್ರಪ್ಪ, ತಾಲ್ಲೂಕ ಅಧ್ಯಕ್ಷ ಪ್ರಸಾದ ರೆಡ್ಡಿ , ತಾಲ್ಲೂಕ ಪ್ರಧಾನ ಕಾರ್ಯದರ್ಶಿ ಬಸವರಾಜ ಅಂಗಡಿ, ಸಿದ್ದು,ತಿಪ್ಪರಾಜ ನಾಯಕ,ಹನುಮಂತ, ಗುರುಬಸವ ನಾಯಕ, ವಿಜಯಕುಮಾರ, ಅನುಮವ್ವ, ಅಕ್ಕಮ್ಮ, ಅಂಬಮ್ಮ, ರಾಮಣ್ಣ, ಬೀಮಣ್ಣ, ಹಸನ್ ಸಾಭ್, ಮೈಬುಸಾಭ್, ಅಲಿಸಾಬ, ಹಸನ್ ಸಾಭ್, ಉಪಸ್ಧಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.