ರಾಯಚೂರು: ಇಲ್ಲಿನ ಬಿಜನಗೇರಾ ರಸ್ತೆಯ ಡಾ.ಬಿ.ಆರ್. ಅಂಬೇಡ್ಕರ್ ಬಾಲಕರ ಪದವಿ ಪೂರ್ವ ವಸತಿ ನಿಲಯಕ್ಕೆ ಮೂಲಸೌಕರ್ಯ ನೀಡಬೇಕು ಎಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಸಮಿತಿಯ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ವಸತಿ ನಿಲಯ ಎದುರು ಪ್ರತಿಭಟನೆ ನಡೆಸಿದರು.

ಸಮಿತಿಯ ಜಿಲ್ಲಾ ಸಂಚಾಲಕ ಮೌನೇಶ ಜಾಲವಾಡಗಿ ಮಾತನಾಡಿ, ‘ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ಬಲಪಡಿಸಲು ಶೋಷಿತ ಸಮುದಾಯಗಳ ಅಭಿವೃದ್ಧಿಗಾಗಿ ಹಲವಾರು ಸಾಮಾಜಿಕ ಮತ್ತು ಶೈಕ್ಷಣಿಕ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ಅಧಿಕಾರಿಗಳು ಸೌಲಭ್ಯ ಒದಗಿಸಲು ಹಿಂದೇಟು ಹಾಕುತ್ತಿದ್ದಾರೆ’ ಎಂದು ಆಪಾದಿಸಿದರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ತಾಲ್ಲೂಕಿನ ಬಿಜನಗೇರಾ ರಸ್ತೆಯಲ್ಲಿರುವ ಪದವಿ ಪೂರ್ವ ಬಾಲಕರ ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳಿಂದ ತೊಂದರೆಗೀಡಾಗಿದ್ದಾರೆ. ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಸಿಗಬೇಕಾದ ಮೂಲಸೌಕರ್ಯಗಳು ಕಣ್ಮರೆಯಾಗಿವೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಇದು ಮಾರಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ವಸತಿ ನಿಲಯದ ವಿದ್ಯಾರ್ಥಿಗಳ ಮೂಲ ಸೌಕರ್ಯಗಳ ನೀಡಬೇಕು. ಮುಂದೆ ಯಾವುದೇ ರೀತಿಯ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ನಂತರ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದರು. ಮುಖಂಡರಾದ ಚನ್ನಬಸವ ಯಾಪಲಪರ್ವಿ, ಪಾಲರಾಜ, ರವಿಕುಮಾರ, ಕುಮಾರ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.