ಸಿಂಧನೂರು: ಇಲ್ಲಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ.ನಾಗರಾಜ್ ಕಾಟ್ವಾ ವರ್ಗಾವಣೆ ಆದೇಶವನ್ನು ಹಿಂಪಡೆದು ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘ ಹಾಗೂ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ ತಾಲ್ಲೂಕು ಘಟಕ ಸೋಮವಾರ ಸ್ಥಳೀಯ ಮಿನಿವಿಧಾನಸೌಧ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿತು.

ಈ ವೇಳೆ ಟಿಯುಸಿಐ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಯರದಿಹಾಳ ಮಾತನಾಡಿ,‘ಬಡ ರೋಗಿಗಳ ಕಷ್ಟಕ್ಕೆ ಮಿಡಿಯುವ ಗುಣ ಹೊಂದಿರುವ ಕಾಟ್ಟಾ ಅವರನ್ನು ಜನರ ಆರೋಗ್ಯದ ಹಿತದೃಷ್ಟಿಯಿಂದ ವರ್ಗಾವಣೆ ಆದೇಶವನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಈ ವೇಳೆ ಕರ್ನಾಟಕ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಪಾಟೀಲ್ ಬೇರಿಗಿ ಮಾತನಾಡಿದರು. ನಂತರ ಗ್ರೇಡ್-2 ತಹಶೀಲ್ದಾರ್ ಚಂದ್ರಶೇಖರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕೆಆರ್ಎಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಚಿಟ್ಟಿಬಾಬು ಬೂದಿವಾಳ ಕ್ಯಾಂಪ್, ಅಸ್ಲಂ, ಮಲ್ಲಪ್ಪ ಹಾದಿಮನಿ, ಬಸವರಾಜ ಕೋಟೆ, ದುರುಗಪ್ಪ ದೇವರಮನಿ, ಸಂಗಯ್ಯಸ್ವಾಮಿ, ರಾಮಣ್ಣ ಸುಕಾಲಪೇಟೆ, ದುರುಗೇಶ, ಶಿವು, ಮುತ್ತಣ್ಣ, ಅಮರೇಶಪ್ಪ ಹೂಗಾರ, ಪಾಮಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.