ಸೋಮವಾರ, ಆಗಸ್ಟ್ 2, 2021
26 °C

ಸಿಇಟಿ ಪರೀಕ್ಷೆ ಮುಂದೂಡಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಕೋವಿಡ್ ಪ್ರಕರಣಗಳು ದಿನದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಿದಂತೆ ಸಿಇಟಿ ಪರೀಕ್ಷೆಯನ್ನು ಮುಂದೂಡಬೇಕು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್  ಆರ್ಗನೈಸೇಶನ್ (ಎಐಡಿಎಸ್ಓ) ಒತ್ತಾಯಿಸಿದೆ.

ಸಂಘದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ವಿದ್ಯಾರ್ಥಿಗಳ ವಿಚಾರದಲ್ಲಿ ಸರ್ಕಾರ ತೆಗೆದುಕೊಂಡಿರುವ ತೀರ್ಮಾನವು ವಿದ್ಯಾರ್ಥಿಗಳು ಪೋಷಕರಲ್ಲಿ ಆತಂಕವನ್ನುಂಟು ಮಾಡಿದೆ ಎಂದು ದೂರಿದರು.

ಇತ್ತೀಚಿನ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಸಿಬಿಎಸ್ಸಿ ಮತ್ತು ಐಸಿಎಸ್ಇ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಆದೇಶ ನೀಡಿದೆ.
ಸರ್ಕಾರವು ಪಿಯು ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯನ್ನು ಜುಲೈ 30 ಮತ್ತು 31 ರಂದು ನಡೆಸುವುದಾಗಿ ತೀರ್ಮಾನಿಸಿದೆ. ಇದರಿಂದಾಗಿ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷೆಯ ವಿಚಾರದಲ್ಲಿ ಒತ್ತಡದ ಪರಿಸ್ಥಿತಿಗೆ ಒಳಗಾಗಿದ್ದಾರೆ. ವಿದ್ಯಾರ್ಥಿಗಳನ್ನಷ್ಟೇ ಅಲ್ಲದೇ, ಅವರ ಪೋಷಕರಿಗೂ ಆತಂಕಕ್ಕೆ ದೂಡಿದೆ ಎಂದು ತಿಳಿಸಲಾಗಿದೆ.

ಜಿಲ್ಲಾಧ್ಯಕ್ಷ ಮಹೇಶ್ ಚಿಕಲಪರ್ವಿ, ಅಪೂರ್ವ, ಪಿರ್ ಸಾಬ್, ಕಾರ್ತಿಕ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.