ಭಾನುವಾರ, ಆಗಸ್ಟ್ 9, 2020
24 °C

ರಾಯಚೂರು: ಆಶಾ ಗೌರವಧನ ಹೆಚ್ಚಳಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಿಂಗಸುಗೂರು: ರಾಜ್ಯವ್ಯಾಪಿ ಕೊರೋನಾ ವೈರಸ್‌ ತಡೆಯುವಲ್ಲಿ ಮತ್ತು ಸರ್ಕಾರದ ನಿರ್ದೇಶನಗಳನ್ನು ಪಾಲಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಹೆಚ್ಚಿದೆ. ಹೀಗಾಗಿ ಅವರ ಗೌರವಧನ ಹೆಚ್ಚಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ) ಆಗ್ರಹಪಡಿಸಿದೆ.

ಬುಧವಾರ ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ ಅವರು, ಕೊರೋನಾ ವಾರಿಯರ್ಸ್‌ ಎಂದು ಹೂವಿನಿಂದ ಸತ್ಕರಿಸುವ ಕಾರ್ಯದಿಂದ ಅವರ ಕುಟುಂಬ ನಿರ್ವಹಣೆ ಸಾಧ್ಯವಿಲ್ಲ. ಲಕ್ಷಗಟ್ಟಲೆ ವೇತನ ಪಡೆದ ನೌಕರರು ಇವರಷ್ಟು ಕರ್ತವ್ಯ ನಿರ್ವಹಿಸಿಲ್ಲ. ಹೀಗಾಗಿ ಸಂಕಷ್ಟದಲ್ಲಿ ಜೀವದ ಹಂಗು ತೊರೆದು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯ ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಎಂ.ಎಂ. ಶಾಲಿ, ಎಂ.ಡಿ ಗೌಸ್‌, ಹನುಮಂತ ನಾಯಕ, ಮೌನೇಶ ಹಟ್ಟಿ, ಸುದೀರ್‌, ಮಲ್ಲುಡಿ, ಕೆ.ವಿ ಕಳ್ಳಿಮಠ, ರಾಮಾಂಜನೇಯ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು