ಮಂಗಳವಾರ, ಮಾರ್ಚ್ 28, 2023
33 °C

ರಾಯಚೂರು: ತಾಲ್ಲೂಕು ಕೇಂದ್ರ ಘೋಷಣೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುದಗಲ್: ಮುದಗಲ್ ತಾಲ್ಲೂಕು ಕೇಂದ್ರಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳು ಜಂಟಿಯಾಗಿ ಲಿಂಗಸುಗೂರು ತಹಶೀಲ್ದಾರ್ ಚಾಮರಾಜ ಪಾಟೀಲರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಮುದಗಲ್ ತಾಲ್ಲೂಕು ಕೇಂದ್ರದ ರಚನೆ ಮಾಡುವಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರಗಳು ಅನ್ಯಾಯ ಮಾಡಿವೆ. ಮುದಗಲ್‌ಗೆ ಆದ ಅನ್ಯಾಯವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸರಿಪಡಿಸಬೇಕು. ಮುದಗಲ್ ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿದರು. 

ಪಟ್ಟಣದ ಜನತೆ ಹಲವಾರು ವರ್ಷಗಳಿಂದಲೂ ಮುದಗಲ್ ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂದು ಹೋರಾಟ ಮಾಡುತ್ತಲೇ ಬಂದಿದ್ದಾರೆ.  ಮುದಗಲ್ ತಾಲ್ಲೂಕು ಕೇಂದ್ರವಾಗಲು ಎಲ್ಲಾ ಅರ್ಹತೆ ಇವೆ. ಆದರೆ ತಾಲ್ಲೂಕು ಕೇಂದ್ರವಾಗಿ ಮಾಡುವಲ್ಲಿ ಸರ್ಕಾರಗಳು ನಿರ್ಲಕ್ಷ್ಯ ವಹಿಸುತ್ತಿವೆ. ಯಡಿಯೂರಪ್ಪ  ಅವರು, ಮುದಗಲ್ ಅನ್ನು ತಾಲ್ಲೂಕು ಕೇಂದ್ರವೆಂದು ಘೋಷಣೆ ಮಾಡಬೇಕೆಂದು ಪ್ರತಿಭಟನೆಕಾರರು ಆಗ್ರಹಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು, ಇಂಡಿಯನ್ ವಾಹನ ಚಾಲಕ ಮತ್ತು ಮಾಲಕರ ಸಂಘ, ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು,  ಪತ್ರಕರ್ತರ ಸಂಘದ ಪದಾಧಿಕಾರಿಗಳು,  ಬಿಜೆಪಿ ಮಂಡಲದ ಪದಾಧಿಕಾರಗಳು, ಕಾಂಗ್ರೆಸ್, ಜೆಡಿಎಸ್ ಬ್ಲಾಕ್ ಘಟಕ ಪದಾಧಿಕಾರಿಗಳು ಪುರಸಭೆ ಸದಸ್ಯ ಅಮೀರಬೇಗ್ ಉಸ್ತಾದ್, ಮುಖಂಡ ಗುರುಬಸಪ್ಪ ಸಜ್ಜನ, ಶರಣಪ್ಪ ಕಟ್ಟಿಮನಿ, ಮಹಾಂತೇಶ, ಶಬ್ಬೀರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು