ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಧನೂರು: ಸ್ವಚ್ಛತೆಯಿಂದ ಡೆಂಗಿ ರೋಗ ನಿಯಂತ್ರಣ; ವೆಂಕಟರಾವ್ ನಾಡಗೌಡ

Last Updated 18 ಮೇ 2022, 4:39 IST
ಅಕ್ಷರ ಗಾತ್ರ

ಸಿಂಧನೂರು: ಎಲ್ಲರೂ ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಿದರೆ ಸೊಳ್ಳೆಯಿಂದ ಹರಡುವ ಡೆಂಗಿಯಂತಹ ರೋಗಗಳನ್ನು ನಿಯಂತ್ರಿಸಬಹುದು ಎಂದು ಶಾಸಕ ವೆಂಕಟರಾವ್ ನಾಡಗೌಡ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ವತಿಯಿಂದ ನಡೆದ ರಾಷ್ಟ್ರೀಯ ಡೆಂಗಿ ದಿನಾಚರಣೆಯ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ಡೆಂಗಿ, ಮಲೇರಿಯಾ, ಚಿಕುನ್‍ ಗುನ್ಯಾದಂತಹ ರೋಗಗಳಿಗೆ ಸೊಳ್ಳೆ ಕಾರಣವಾಗಿದೆ. ಮನೆಯ ಸುತ್ತಲಿನ ವಾತಾವರಣ ಸ್ವಚ್ಛವಾಗಿ ಇರಿಸಿದರೆ ಸೊಳ್ಳಗಳ ಉತ್ಪತ್ತಿ ಕಡಿಮೆ ಆಗುತ್ತದೆ ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ, ಡಾ.ನಾಗರಾಜ ಕಾಟ್ವಾ, ಡಾ.ಗಂಗಾಧರ್ ಬುರಡೆ, ಆರೋಗ್ಯ ನಿರೀಕ್ಷಣಾಧಿಕಾರಿ ಸಂಗನ ಗೌಡ, ಎಸ್.ಎ.ಹಣಗಿ, ಡಾ.ಬಸವರಾಜ, ರಂಗನಾಥ ಗುಡಿ ಇತರರು ಇದ್ದರು.

ಗಾಂಧಿ ವೃತ್ತದ ಮೂಲಕ ಪ್ರಮುಖ ರಸ್ತೆ, ಬಡಾವಣೆಗಳಲ್ಲಿ ಜಾಥಾ ಸಂಚರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT