ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಂಗಿ, ಮಲೇರಿಯಾ ನಿಯಂತ್ರಿಸಲು ಕ್ರಮ: ಡಾ. ನಾಗರಾಜ

ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ
Last Updated 27 ಅಕ್ಟೋಬರ್ 2021, 15:44 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಮಲೇರಿಯಾ, ಡೆಂಗಿ ಸೇರಿದಂತೆ ರೋಗಗಳ ನಿಯಂತ್ರಣ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ನಾಗರಾಜ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈಚೆಗೆ ಏರ್ಪಡಿಸಿದ್ದ ಡೆಂಗಿ ಹಾಗೂ ಮಲೇರಿಯಾ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೊದಲಿಗೆ ಜ್ವರ, ಮೈ ಕೈನೋವು, ವಾಂತಿ, ವಿಪರೀತವಾದ ತಲೆನೋವು, ಬಿಟ್ಟು ಬಿಟ್ಟು ಜ್ವರ ಬರುವುದು ಇವು ಮುಖ್ಯವಾಗಿ ಮಲೇರಿಯಾ ರೋಗದ ಲಕ್ಷಣಗಳಾಗಿವೆ. ಸಾರ್ವಜನಿಕರು ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮನೆ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು. ನಿಂತ ನೀರನ್ನು ಸರಾಗವಾಗಿ ಹರಡುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಲಕಾಲಕ್ಕೆ ಘನತ್ಯಾಜ್ಯ ವಿಲೇವಾರಿ ಮಾಡಿ ಸೊಳ್ಳೆ ಉತ್ಪತ್ತಿಗೆ ಅವಕಾಶ ನೀಡಬಾರದು. ದೋಣಿಗಳಲ್ಲಿ ನೀರು ಸಂಗ್ರಹ ಟ್ಯಾಂಕ್, ಬ್ಯಾರಲ್‌ಗಳನ್ನು ಮುಚ್ಚಳದಿಂದ ಮುಚ್ಚಬೇಕು. ಪ್ಲಾಸ್ಟಿಕ್ ಕ್ರೇಟ್‌ಗಳಲ್ಲಿ, ಟೈರ್ ಮತ್ತು ತಂಪು ಪಾನೀಯದ ಖಾಲಿ ಬಾಟಲ್‌ಗಳಲ್ಲಿ ನೀರು ಸಂಗ್ರಹ, ಸೊಳ್ಳೆ ಉತ್ಪಾದನೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಗ್ರಾಮೀಣ ಭಾಗದಿಂದ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ನಗರದ ಆಶಾ ಕಾರ್ಯಕರ್ತೆಯರ ತಂಡವನ್ನು ರಚಿಸಲಾಗಿದೆ. ಪ್ರತಿ ತಂಡವು ಪ್ರತಿದಿನ 100ರಂತೆ ಮನೆ ಮನೆ ಭೇಟಿ ನೀಡಿ ಜ್ವರದ ಪ್ರಕರಣ ಹಾಗೂ ಲಾರ್ವಾ ಸಮೀಕ್ಷೆ ಮಾಡುತ್ತಿದ್ದು, ಸುಮಾರು 50 ತಂಡಗಳನ್ನು ರಚಿಸಿ ಸಮೀಕ್ಷೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಕೆ.ಗಣೇಶ, ತಾಲ್ಲೂಕು ಅರೋಗ್ಯ ಅಧಿಕಾರಿ ಡಾ.ಮಹ್ಮದ ಶಾಕೀರ್‌, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಂಗರಾವ್ ಕುಲಕರ್ಣಿ, ರೋಗ ವಾಹಕ ಅಶ್ರಿತ ರೋಗಿಗಳ ಮೇಲ್ವಿಚಾರಕಿ ಸಂದ್ಯಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಕಾರಿ ಸರೋಜಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT