ದೇವದುರ್ಗ: ‘ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು’ ಎಂದು ಶಾಸಕಿ ಕರೆಮ್ಮ ಜಿ.ನಾಯಕ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಸಂಚಾರಿ ಆರೋಗ್ಯ ಘಟಕದ ಸುರಕ್ಷಿತ ವಾಹನಕ್ಕೆ ಚಾಲನೆ ಮತ್ತು ಕಟ್ಟಡ ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪ್ರಧಾನಮಂತ್ರಿ ಇದ್ದಾಗ ಕಾರ್ಮಿಕರ ಹಿತಕ್ಕಾಗಿ ಇಡೀ ದೇಶದಾದ್ಯಂತ ಕಾರ್ಮಿಕರ ಕಾಯ್ದೆ ಜಾರಿಗೆ ತಂದಿದ್ದಾರೆ. ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆ ಮಾಡಿ ಕಾರ್ಮಿಕರ ಕಾಯ್ದೆಗೆ ಹೆಚ್ಚಿನ ಶಕ್ತಿ ನೀಡಿದ್ದಾರೆ’ ಎಂದರು.

‘ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜೊತೆಗೆ ಮಾತನಾಡಿ ತಾಲ್ಲೂಕಿಗೆ ಶ್ರಮಿಕ ವಸತಿ ಶಾಲೆ ಮಂಜೂರು ಮತ್ತು ಕಾರ್ಮಿಕ ಭವನ ನಿರ್ಮಾಣಕ್ಕೆ ಮನವಿ ಮಾಡಲಾಗಿದೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸಲಾಯಿತು.

ಸಿಐಟಿಯು ರಾಜ್ಯ ಕಾರ್ಯದರ್ಶಿ ಶಬ್ಬೀರ್ ಜಾಲಹಳ್ಳಿ, ಶರಣಪ್ಪ ಬಳೆ, ಸಿದ್ದಣ್ಣ ತಾತ, ಬಸನಗೌಡ ದೇಸಾಯಿ, ಶರಣಗೌಡ ಸುಂಕೇಶ್ವರಹಾಳ, ಸಿದ್ದಣ್ಣ ಗಣೇಕಲ್, ಶಾಲಂ ಉದ್ಧಾರ, ಕಾರ್ಮಿಕ ಇಲಾಖೆ ಅಧಿಕಾರಿ ಮಲ್ಲಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-32-738505122

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.