ದೇವದುರ್ಗ: ‘ಡೆಂಗಿ ಸೇರಿದಂತೆ ಸಾಂಕ್ರಾಮಿಕ ಕಾಯಿಲೆಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬನದೇಶ್ವರ ಹೇಳಿದರು.

ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಇಲಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಮಳೆನೀರು ಸರಾಗವಾಗಿ ಹರಿಯಲು ಅವಕಾಶ ನೀಡದಿದ್ದರೆ ಸಾಂಕ್ರಾಮಿಕ ಕಾಯಿಲೆ ಹರಡುವ ಸೊಳ್ಳೆಗಳ ಉತ್ಪತ್ತಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಜನರಿಗೆ ಅರಿವು ಮೂಡಿಸುತ್ತಾರೆ. ಸಾರ್ವಜನಿಕರು ಇದನ್ನು ಅರಿತುಕೊಂಡು ಜಾಗೃತರಾಗಿರಬೇಕು’ ಎಂದರು.

ರಾಷ್ಟ್ರೀಯ ಕೀಟಜನ್ಯ ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಆಶಾ ಕಾರ್ಯಕರ್ತೆಯರು ಮನೆಮನೆ ಭೇಟಿ, ಲಾರ್ವಾ ಸಮೀಕ್ಷೆ, ಪುರಸಭೆ ಮತ್ತು ಗ್ರಾಮ ಪಂಚಾಯತಿ ವತಿಯಿಂದ ಫಾಗಿಂಗ್ ಮಾಡಿಸಲಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ರಕ್ತ ಪರೀಕ್ಷೆ, ಚಿಕಿತ್ಸೆ ಸಿಗುತ್ತದೆ. ಡೆಂಗಿ ಬಂದರೆ ಭಯಬೇಡ, ಆದರೆ ನಿರ್ಲಕ್ಷ್ಯ ಬೇಡ. ಸ್ವಚ್ಛತೆ ಕಾಪಾಡಿದರೆ ಸೊಳ್ಳೆಯನ್ನೇ ಹುಟ್ಟದಂತೆ ಮಾಡಬಹುದು.

ಡಾ.ತ್ಯಾಗರಾಜ, ಅಬೆಲ್ ಶಾಂತಶೀಲನ್, ಓಂಕಾರ, ಗೀತಮ್ಮ, ಚನ್ನಬಸಯ್ಯ, ಸೋಮಪ್ಪ, ರಾಚನಗೌಡ, ಪ್ರಭುರಾಜಾ, ಇಮಾಮ್, ಸುದೀಪ ಕುಮಾರ, ದೇವರಾಜ, ಶರಣಪ್ಪ, ಮನೋಜ, ನರಸಣ್ಣ, ಈಶ್ವರ, ಆಶಾ ಕಾರ್ಯಕರ್ತೆ ಶ್ರುತಿ, ದೀಪಾ, ಶಾಂತಮ್ಮ, ಸಬೀನಾ ಬಾನು, ಭೀಮಮ್ಮ, ರಹಿಮ್ಯುನಿಷಾ, ನಾಗಮ್ಮ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-32-1846352797

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.