ದೇವದುರ್ಗ: ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ ಜೂನ್ 28ರಿಂದ ಆರಂಭಿಸಲಾಗಿದ್ದು, ಜುಲೈ 1ರವರೆಗೆ ನಡೆಯಲಿದೆ. ತಾಲ್ಲೂಕಿನ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತಾಲ್ಲೂಕು ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬನದೇಶ್ವರ ಗಬ್ಬೂರು ಮಾತನಾಡಿ, ‘ಜೂನ್ 30ರಂದು ಗ್ರಾಮೀಣ ಪ್ರದೇ ಶಗಳಲ್ಲಿ, ಜೂನ್ 28 ರಿಂದ ಜುಲೈ 1ರವರೆಗೆ ನಗರ ಪ್ರದೇಶಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ, ಮನೆಗೆ ಭೇಟಿ ನೀಡಿ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಹನಿ ಹಾಕಲಿದ್ದಾರೆ. ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು’ ಎಂದು ಮನವಿ ಮಾಡಿದರು.

ಲಸಿಕಾ ಅಭಿಯಾನ ಸಂದರ್ಭದಲ್ಲಿ ಜೆಸ್ಕಾಂನವರು ನಿರಂತರ ವಿದ್ಯುತ್ ಒದಗಿಸುವಂತೆ ಟಿಎಚ್ಒ ಮನವಿ ಮಾಡಿದರು.

ಪುರಸಭೆ ಮುಖ್ಯಾಧಿಕಾರಿ ಹಂಪಯ್ಯ ಕೆ, ಸಹಾಯಕ ನಿರ್ದೇಶಕಿ ಮಹೇಶ್ವರಿ, ಸಹಾಯಕ ಸಿಡಿಪಿಒ ಗಂಗಮ್ಮ ಮತ್ತು ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-32-2141013359

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.