ದೇವದುರ್ಗ: ರಾಜ್ಯ ಸರ್ಕಾರ ಮ್ಯಾಗ್ನೆಟ್ ಯೋಜನೆಯಡಿ ಅರಕೇರ ತಾಲ್ಲೂಕಿನ ಆಲ್ಕೋಡ್ ಕೆಪಿಎಸ್ ಶಾಲೆಗೆ ಅಡಕಲಗುಡ್ಡ, ಸಿಂಗೇರಿ ದೊಡ್ಡಿ, ಉಲಕಬಂಡ ಮತ್ತು ಕುರ್ಲೇರದೊಡ್ಡಿ ಶಾಲೆ ವಿಲೀನಗೊಳಿಸು ತ್ತಿರುವುದನ್ನು ವಿರೋಧಿಸಿ ಎಐಡಿಎಸ್ಒ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳವರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಎಐಡಿಎಸ್ಒ ಜಿಲ್ಲಾ ಅಧ್ಯಕ್ಷ ಹಯ್ಯಾಳಪ್ಪ ಮಾತನಾಡಿ,‘ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿಗೆ ಒಂದರಂತೆ 6 ಸಾವಿರ ಶಾಲೆ ತೆರೆದು, ಸುಮಾರು 40 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ಆರಂಭಿಸಲು ಆದೇಶ ನೀಡಿದೆ. ಈ ಮೂಲಕ ಕನ್ನಡ ಶಾಲೆಗಳನ್ನು ಮುಚ್ಚಲು ಹುನ್ನಾರ ನಡೆಸಿದೆ’ ಎಂದು ಆರೋಪಿಸಿದರು.

ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸಂಘಟಕ ಮಲ್ಲನಗೌಡ ಮಾತನಾಡಿ,‘ಸರ್ಕಾರ ಕ್ರಮೇಣವಾಗಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆ ಮಾಡಿ, ನಿರ್ನಾಮ ಮಾಡಲು ಹೊರಟಿದೆ. ಮೊದಲು ಮಾತೃ ಭಾಷೆಯಲ್ಲಿ ಶಿಕ್ಷಣ ನೀಡಬೇಕು. ಸರ್ಕಾರ ಶಾಲೆಗಳನ್ನು ಮುಚ್ಚಬಾರದು’ ಎಂದು ಆಗ್ರಹಿಸಿದರು.

ಎಐಡಿಎಸ್ಒ ಸಂಘಟನೆ ಪದಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಸದಸ್ಯರು, ತಾಲ್ಲೂಕಿನ ಅಡಕಲಗುಡ್ಡ, ಸಿಂಗೇರಿ ದೊಡ್ಡಿ, ಉಲಕಬಂಡ, ಕುರ್ಲೇರದೊಡ್ಡಿ ಗ್ರಾಮದ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-32-1371027752

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.