ದೇವದುರ್ಗ: ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕಂದಾಯ ಇಲಾಖೆಯಲ್ಲಿ ಕಂದಾಯ ನಿರೀಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೀಮನಗೌಡ ಪಾಟೀಲ ಅವರಿಗೆ ಗುರುವಾರ ಶಾಸಕಿ ಬೆಂಬಲಿಗ, ಜೆಡಿಎಸ್ ಮುಖಂಡ ಶಾಲಂ ಉದ್ದಾರ ಅಶ್ಲೀಲ ಪದಗಳಿಂದ ನಿಂದನೆ ಮಾಡಿ ಹಲ್ಲೆ ಮಾಡಿದ್ದಾರೆ.
ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಅವರಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎನ್ನುವ ವಿಡಿಯೊ ಮತ್ತು ದೂರಿನ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.