ಜಾಲಹಳ್ಳಿ: ‘ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಜನತೆ ಸಹಕಾರ ನೀಡುವ ಮೂಲಕ ಗುಣಮಟ್ಟದ ಕಾಮಗಾರಿಗಳು ನಡೆಯುವಂತೆ ಗಮನ ಹರಿಸಬೇಕು ಎಂದು ಶಾಸಕಿ ಕರೆಮ್ಮ ಜಿ.ನಾಯಕ ಹೇಳಿದರು.

ಸಮೀಪದ ಚಿಂಚೋಡಿ ಗ್ರಾಮದಲ್ಲಿ ಗುರುವಾರ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಿ ಮಾತನಾಡಿದರು.

‘ಯರಗುಡ್ಡ ಗ್ರಾಮದಲ್ಲಿ ₹ 30 ಲಕ್ಷ, ಲಿಂಗದಹಳ್ಳಿ ಗ್ರಾಮದಲ್ಲಿ ₹ 20 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ, ಮುದ್ದಗೋಟ ಗ್ರಾಮದಲ್ಲಿ ₹ 36 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಹಾಗೂ ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣ, ಹಾಗೂ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ರಂಗನಾಥ ದೇವಸ್ಥಾನದ ಮುಖ್ಯ ರಸ್ತೆಗೆ ಸಿ.ಸಿ ಹಾಗೂ ಚರಂಡಿ ನಿರ್ಮಾಣಕ್ಕೆ ₹ 1 ಕೋಟಿ ಅನುದಾನ ನೀಡಲಾಗಿದೆ’ ಎಂದು ಹೇಳಿದರು.

‘ಸರ್ಕಾರಿ ಕನ್ಯಾ ಪ್ರೌಢ ಶಾಲಾ ಕೋಣೆ ನಿರ್ಮಾಣಕ್ಕೆ ₹58 ಲಕ್ಷ ಮತ್ತು ತಿಂಪೂರ ದೊಡ್ಡಿ ಪ್ರಾಥಮಿಕ ಶಾಲಾ ಕೋಣೆ ನಿರ್ಮಾಣಕ್ಕೆ ₹29 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ. ಅಲ್ಲದೇ ಉತ್ತಿನ ಎಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ₹ 5 ಲಕ್ಷ ನೀಡಲಾಗಿದೆ. ಕರಿಗುಡ್ಡ ಗ್ರಾಮದಲ್ಲಿ ಶಾಲಾ ಕೋಣೆ ನಿರ್ಮಾಣಕ್ಕೆ ₹1.16 ಕೋಟಿ ಮಂಜೂರಾಗಿದೆ’ ಎಂದು ತಿಳಿಸಿದರು.

‘ಯಾವುದೇ ಕಾರಕ್ಕೂ ಕಳಪೆ ಗುಣಮಟ್ಟದ ಕಾಮಗಾರಿ ಅವಕಾಶ ನೀಡದೇ ಜನತೆ ಕಾಮಗಾರಿ ಬಗ್ಗೆ ಕಾಳಜಿ ವಹಿಸಬೇಕು. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಸ್ಥಳದಲ್ಲಿಯೇ ಇದ್ದು ಕಾಮಗಾರಿಗಳ ನಿರ್ವಹಣೆ ಮಾಡಬೇಕು’ ಎಂದು ತಾಕೀತು ಮಾಡಿದರು.

ಚಿಂಚೋಡಿ ಗ್ರಾಮದಲ್ಲಿ ₹50 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಜಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಾದೇವಯ್ಯ, ಬಿಆರ್ ಸಿ ಶಿವರಾಜ ಪೂಜಾರಿ, ಮುಖಂಡರಾದ ಸಿದ್ದನಗೌಡ ಪಾಟೀಲ, ಗೋವಿಂದ ರಾಜ ನಾಯಕ, ಇಸಾಕ್ ಮೇಸ್ತ್ರಿ, ದಾವುದ್ ಔಂಟಿ, ಪ್ರಭು ದೊರೆ ಸೇರಿದಂತೆ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.