ಸೂಗೂರೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು

ದೇವಸೂಗೂರು (ಶಕ್ತಿನಗರ): ಲಾಕ್‌ಡೌನ್ ಸಡಿಲಿಕೆ ಮಾಡಿರುವುದರಿಂದ ದೇವಸೂಗೂರು ಗ್ರಾಮದ ಸೂಗೂರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸೋಮವಾರ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಕೋವಿಡ್ ನಿಯಂತ್ರಣಕ್ಕೆ ಮುಂಜಾಗರೂಕತೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ದೇವಸ್ಥಾನದ ಸಿಬ್ಬಂದಿಯು ಭಕ್ತರಿಗೆ ಥರ್ಮಲ್ ಸ್ರ್ಕೀನಿಂಗ್ ಮಾಡಿ ಮತ್ತು ಸ್ಯಾನಿಟೈಸರ್ ನೀಡಿದರು. ಬಾಗಿಲಿನಿಂದ ದೇವಸ್ಥಾನದವರೆಗೆ ಗುರುತಿಸಲಾಗಿದ್ದ ಜಾಗದಲ್ಲಿ ಭಕ್ತರು ಅಂತರ ಕಾಯ್ದುಕೊಂಡು ದೇವರ ದರ್ಶನ ಪಡೆದರು.
ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅವರು ಸೂಗೂರೇಶ್ವರ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ, ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದರು. ಕರ್ನಾಟಕ ಲೋಕ ಸೇವಾ ಆಯೋಗದ ಅಧ್ಯಕ್ಷ ಶಿವಶಂಕ್ರಪ್ಪ ಸಾಹುಕಾರ್, ಜಿಲ್ಲಾ ಉಪವಿಭಾಗಾಧಿಕಾರಿ ಸಂತೋಷಕುಮಾರ ಕಾಮಗೌಡ, ಸೂಗೂರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹಂಪನಗೌಡ ಪೊಲೀಸ್ ಪಾಟೀಲ್, ಕಾರ್ಯನಿರ್ವಹಣಾಧಿಕಾರಿ ಪಿ.ಶಾಂತಮ್ಮ, ದೇವಸೂಗೂರು ಹೋಬಳಿ ನಾಡ ಕಚೇರಿಯ ಉಪ ತಹಶೀಲ್ದಾರ್ ಮಹೇಶ, ಕಂದಾಯ ನಿರೀಕ್ಷಕ ಭೂಪತಿ, ಗ್ರಾಮಲೆಕ್ಕಾಧಿಕಾರಿ ಸುರೇಶ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.