ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಬಾಗಿಲು ತಟ್ಟಿದ ಮೇಟಿ?

ಮಾನ್ವಿಗೆ ಬಂದಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಭೇಟಿ ಮಾಡಿದ ಶರಣಪ್ಪ
ಬಿ.ಎ.ನಂದಿಕೋಲಮಠ
Published 28 ಏಪ್ರಿಲ್ 2024, 5:09 IST
Last Updated 28 ಏಪ್ರಿಲ್ 2024, 5:09 IST
ಅಕ್ಷರ ಗಾತ್ರ

ಲಿಂಗಸುಗೂರು: ಬಂಡಾಯ ಎದ್ದಿರುವ ಕಾಂಗ್ರೆಸ್‍ ಮುಖಂಡ, ಜಿಲ್ಲಾ ಕಾಂಗ್ರೆಸ್‍ ಮಾಜಿ ವಕ್ತಾರ ಶರಣಪ್ಪ ಮೇಟಿ ನೇತೃತ್ವದ ತಂಡ ಲೋಕಸಭಾ ಚುನಾವಣೆ ಚಟುಟಿಕೆಗಳಲ್ಲಿ ತಟಸ್ಥ ನೀತಿ ಅನುಸರಿಸುತ್ತಿದೆ. ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೆ ಹೈಕಮಾಂಡ್‍ ಬಾಗಿಲು ತಟ್ಟಿರುವುದು ದೃಢಪಟ್ಟಿದೆ.

ಕೊಪ್ಪಳ ಜಿಲ್ಲಾ ಕಾಂಗ್ರೆಸ್‍ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪುರ ಅವರ ಸ್ನೇಹಿತ ಶರಣಪ್ಪ ಮೇಟಿ ಸದಾ ಬಯ್ಯಾಪುರ ನಡೆಯಲ್ಲಿ ಹೆಜ್ಜೆ ಹಾಕುತ್ತ ಬಂದಿದ್ದರು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಹ ಶರಣಗೌಡ ಪಾಟೀಲ ಅವರ ತಂಡದೊಂದಿಗೆ ಗುರುತಿಸಿಕೊಂಡು ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡಿದ್ದರು.

ಈಚೆಗೆ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ, ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರು ಶರಣಪ್ಪ ಮೇಟಿ ಅವರ ಮನೆಗೆ ಭೇಟಿ ನೀಡಿ ಬಿಜೆಪಿಯನ್ನು ಬೆಂಬಲಿಸಲು ಕೋರಿದ್ದರು.

ಈಚೆಗೆ ಮಾನ್ವಿಗೆ ಬಂದಿದ್ದ ಬಿಜೆಪಿ ಶಾಸಕ ಬಸವರಾಜ ಪಾಟೀಲ ಯತ್ನಾಳ ಅವರನ್ನು ಭೇಟಿ ಮಾಡಿದ್ದು ಬಿಜೆಪಿ ಸೇರ್ಪಡೆ ಖಚಿತವಾದಂತಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ಹಿಂಬಾಕಲರು ಸುಳಿವು ನೀಡಿದ್ದಾರೆ.

ಈ ಕುರಿತು ಶರಣಪ್ಪ ಮೇಟಿ ಅವರನ್ನು ‘ಪ್ರಜಾವಾಣಿ’ ಸಂಪರ್ಕಿಸಿದಾಗ, ‘ರಾಷ್ಟ್ರದಲ್ಲಿ ಕಾಂಗ್ರೆಸ್‌ನ ಹೀನಾಯ ಸ್ಥಿತಿ ಹಾಗೂ ದ್ವಂದ್ವ ನೀತಿಗೆ ಬೇಸತ್ತು ತಟಸ್ಥ ನೀತಿ ಅನುಸರಿಸುತ್ತಿರುವೆ. ಬಿಜೆಪಿ ಅಭ್ಯರ್ಥಿಗಳ ಭೇಟಿ, ಪ್ರಧಾನಿ ನರೇಂದ್ರ ಮೋದಿ ಆಡಳಿತದ ವೈಖರಿ, ವಿಶ್ವದ ಭೂಪಟದಲ್ಲಿ ಭಾರತ ತಲೆ ಎತ್ತಿ ನಿಲ್ಲುವಂತೆ ಮಾಡಿದ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿ ಎಂಬುದು ತಮ್ಮ ಕನಸು. ಹೈಕಮಾಂಡ್‍ ಒಪ್ಪಿದಲ್ಲಿ ಶೀಘ್ರದಲ್ಲಿಯೇ ಬಿಜೆಪಿ ಸೇರ್ಪಡೆ ಆಗುವುದು ಖಚಿತ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT