ರಾಯಚೂರು: ‘ಜನಗಣತಿ ಕಾರ್ಯವನ್ನು ಸಂವಿಧಾನ ಬದ್ಧವಾದ ಕರ್ತವ್ಯ ಎಂದು ಭಾವಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾರ್ಗಸೂಚಿಯ ಅನುಸಾರ ಜನಗಣತಿ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗಿಯಾಗಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜನಗಣತಿ-2027 ಹಿನ್ನೆಲೆಯಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳು, ಚಾರ್ಜ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿ ಮೂರು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಜನಗಣತಿಯು ಡಿಜಿಟಲ್ ಮೋಡ್ನಲ್ಲಿ ನಡೆಯಲಿದೆ. ಇಲ್ಲಿ ಬರುವ ಪ್ರಶ್ನಾವಳಿಗಳನ್ನು ಸರಿಯಾಗಿ ಓದಿ ತಿಳಿದುಕೊಳ್ಳಬೇಕು. ಯಾವುದೇ ಗೊಂದಲಗಳಿದ್ದಲ್ಲಿ ಪರಿಹರಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಏಪ್ರಿಲ್ನಿಂದ ಸೆಪ್ಟೆಂಬರ್ 2026ರವರೆಗೆ ಮನೆ ಪಟ್ಟಿ ಮತ್ತು ವಸತಿ ಗಣತಿ ಮತ್ತು ಫೆಬ್ರುವರಿ 2027ರಲ್ಲಿ ಜನಸಂಖ್ಯೆ ಎಣಿಕೆ ನಡೆಯಲಿದೆ’ ಎಂದು ಹೇಳಿದರು.

‘ಕ್ಷೇತ್ರ ದತ್ತಾಂಶ ಸಂಗ್ರಹಣೆಗಾಗಿ ಮೀಸಲಾದ ಮೊಬೈಲ್ ಅಪ್ಲಿಕೇಶನ್ ಮೂಲಕ ಸಂಪೂರ್ಣ ಕಾರ್ಯವನ್ನು ನಡೆಸಲಾಗುವುದು. ಇದು ನೈಜ ಸಮಯದ ದತ್ತಾಂಶ ಸೆರೆಹಿಡಿಯುವಿಕೆ, ವರ್ಧಿತ ನಿಖರತೆ, ಪಾರದರ್ಶಕತೆ ಮತ್ತು ವೇಗದ ಸಂಸ್ಕರಣೆಯನ್ನು ಖಚಿತಪಡಿಸುತ್ತದೆ’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಮಾತನಾಡಿ, ‘ಕರ್ನಾಟಕದಲ್ಲಿ ಜನಗಣತಿಯು ಒಟ್ಟು ಎರಡು ಹಂತಗಳಲ್ಲಿ ನಡೆಯಲಿದೆ. ಜನಗಣತಿ ನಿರ್ದೇಶನಾಲಯವು ನೀಡುವ ಯಾವುದೇ ಬಗೆಯ ಮಾರ್ಗಸೂಚಿಗಳನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಅರ್ಥೈಸಿಕೊಂಡು ಜನಗಣತಿ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸೂಚಿಸಿದರು.

ಕಾರ್ಯಾಗಾರದ ಮೊದಲ ದಿನ ಜನಗಣತಿಯ ಹಿನ್ನೆಲೆ, ಜನಗಣತಿಯ ಪ್ರಕ್ರಿಯೆ, ಜನಗಣತಿಯ ವಿಧಾನಗಳು, ಜನಗಣತಿಯಲ್ಲಿ ಭಾಗಿಯಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯಗಳ ಬಗ್ಗೆ ತರಬೇತಿಯಲ್ಲಿ ಸಮಗ್ರವಾಗಿ ವಿವರಿಸಲಾಯಿತು.

ತರಬೇತಿ ಕಾರ್ಯಗಾರದ ಉದ್ಘಾಟನಾ ಸಮಾರಂಭದಲ್ಲಿ ಲಿಂಗಸುಗೂರು ಉಪ ವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ. ಟಿ.ರೋಣಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಡಿ.ಬಡಿಗೇರ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿಯ ಸಹಾಯಕ ನಿರ್ದೇಶಕ ಬಸವರಾಜ ನಾಗರಬೆಂಚಿ ಉಪಸ್ಥಿತರಿದ್ದರು.

ತರಬೇತಿಯಲ್ಲಿ ಸಿಂಧನೂರು, ಮಾನ್ವಿ, ಮಸ್ಕಿ, ಲಿಂಗಸುಗೂರು, ದೇವದುರ್ಗ ಹಾಗೂ ಅರಕೇರಾ ತಹಶೀಲ್ದಾರರು, ದೇವದುರ್ಗ, ಮುದಗಲ್, ಲಿಂಗಸುಗೂರು, ಮಾನ್ವಿ ಮತ್ತು ಮಸ್ಕಿ ಪುರಸಭೆಗಳ ಮತ್ತು ತುರವಿಹಾಳ, ಹಟ್ಟಿ, ಬಳಗಾನೂರ, ಸಿರವಾರ, ಕವಿತಾಳ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು, ವಿಷಯ ನಿರ್ವಾಹಕರು ಹಾಗೂ ತಾಂತ್ರಿಕ ಸಹಾಯಕರು ಪಾಲ್ಗೊಂಡಿದ್ದರು.

ಐಎಎಸ್ ಪ್ರೊಬೇಷನರಿ ಅಧಿಕಾರಿ ಹಾಗೂ ತಹಶೀಲ್ದಾರ್ ಪುರುರಾಜ್ಸಿಂಗ್ ಸೋಲಂಕಿ ಸ್ವಾಗತಿಸಿದರು. ಶಿರಸ್ತೇದಾರ್ ಸೂಗುರೇಶ ದೇಸಾಯಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.