ಮಂಗಳವಾರ, ಅಕ್ಟೋಬರ್ 20, 2020
23 °C
ಆನ್‍ಲೈನ್ ಮೂಲಕ 3,200 ಸದಸ್ಯರ ನೋಂದಣಿ

ಮಾನ್ವಿ ಗ್ರಂಥಾಲಯಕ್ಕೆ ಡಿಜಿಟಲ್ ಸ್ಪರ್ಶ

ಬಸವರಾಜ ಭೋಗಾವತಿ Updated:

ಅಕ್ಷರ ಗಾತ್ರ : | |

Prajavani

ಮಾನ್ವಿ: ಪಟ್ಟಣದ ಸಾರ್ವಜನಿಕ ಗ್ರಂಥಾಲಯ ಸಂಪೂರ್ಣ ಡಿಜಿಟಲ್ ಸೌಲಭ್ಯ ಹೊಂದುವ ಮೂಲಕ ಇ-ಗ್ರಂಥಾಲಯವಾಗಿ ಓದುಗರಿಗೆ ನೆರವಾಗುತ್ತಿದೆ. ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಕಳೆದ ಫೆಬ್ರವರಿ ತಿಂಗಳಲ್ಲಿ ಇ-ಗ್ರಂಥಾಲಯದ ಸೌಲಭ್ಯ ಒದಗಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

ಗ್ರಂಥಾಲಯದಲ್ಲಿ 2 ಕಂಪ್ಯೂಟರ್ ಹಾಗೂ 4 ಟ್ಯಾಬ್‍ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಮಾರ್ಚ್ ತಿಂಗಳಲ್ಲಿ ಕೋವಿಡ್-19 ರೋಗದ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಜಾರಿಯಾದ ನಂತರ ಗ್ರಂಥಾಲಯ ಮುಚ್ಚಿದ್ದರಿಂದ ಓದುಗರಿಗೆ ತೊಂದರೆಯಾಗಿತ್ತು. ಓದುಗರು ಇ-ಸಾರ್ವಜನಿಕ ಗ್ರಂಥಾಲಯ ಮೊಬೈಲ್ ಆ್ಯಪ್‍ನಿಂದ ಸದಸ್ಯತ್ವ ನೋಂದಾಯಿಸಿಕೊಂಡು ಯೋಜನೆಯ ಲಾಭ ಪಡೆದಿದ್ದಾರೆ. ಇದುವರೆಗೆ ತಾಲ್ಲೂಕಿನ 3,200 ಓದುಗರು ಆನ್‍ಲೈನ್ ಮೂಲಕ ಸದಸ್ಯತ್ವದ ನೋಂದಣಿ ಮಾಡಿಸಿದ್ದಾರೆ.

ಓದುಗರು ಅಧಿಕೃತ ವೆಬ್‍ಸೈಟ್ www.karnatakadigitalpubliclibrary.org ಅಥವಾ ಇ-ಸಾರ್ವಜನಿಕ ಗ್ರಂಥಾಲಯ ಮೊಬೈಲ್ ಆ್ಯಪ್ ಮೂಲಕ ಸದಸ್ಯರಾಗಿ ನೋಂದಾಯಿಸಿಕೊಂಡು ತಮ್ಮ ಗ್ರಂಥಾಲಯದ ಸ್ಥಳ ಹಾಗೂ ಅಗತ್ಯ ಪುಸ್ತಕಗಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ.

‘ಇ-ಗ್ರಂಥಾಲಯದಲ್ಲಿ ಕಥೆ, ಕವನ, ಕಾದಂಬರಿ, ಶೈಕ್ಷಣಿಕ ಪಠ್ಯಪುಸ್ತಕ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳು, ಎಲ್ಲಾ ಭಾಷೆಯ ದಿನಪತ್ರಿಕೆ, ನಿಯತಕಾಲಿಕೆಗಳನ್ನು ಓದಬಹುದಾಗಿದೆ‘ ಎಂದು ಜಿಲ್ಲಾ ಮುಖ್ಯ ಗ್ರಂಥಾಲಯ ಅಧಿಕಾರಿ ಎಂ.ಎಸ್.ರಬಿನಾಳ ತಿಳಿಸಿದ್ದಾರೆ.

ಇ-ಗ್ರಂಥಾಲಯ ಸೌಲಭ್ಯದ ಕುರಿತು ಸ್ಥಳೀಯರು, ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.